ಸುರತ್ಕಲ್: ಕಾರೊಂದು ಬೈಕ್‌ಗೆ ಹಿಟ್ ಆಗಿ ರನ್ ಆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಸುರತ್ಕಲ್ ಸಮೀಪದ ಚಿತ್ರಾಪುರ ದ್ವಾರದ ಸಮೀಪದ ಇಂದು ಸಂಭವಿಸಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸುರತ್ಕಲ್‌ನಿಂದ ಮಂಗಳೂರಿನತ್ತ ತೆರಳುತ್ತಿದ್ದ ಬೈಕ್‌ನಲ್ಲಿ ಇಬ್ಬರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಒರೆಸಿದ್ದು, ಚಾಲಕ ತನ್ನ ವಾಹನವನ್ನು ನಿಲ್ಲಿಸದೆ ಪರಾರಿಯಾಗಿದ್ದಾನೆ.
ನಿಯಂತ್ರಣ ಕಳೆದುಕೊಂಡ ಬೈಕ್ ಸಮೀಪದ ಕಮರಿಗೆ ಉರುಳಿಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಸ್ಥಳೀಯರು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಸಿ ಟಿವಿ ಫುಟೇಜ್ ಮೂಲಕ ಕಾರನ್ನು ಪತ್ತೆಹಚ್ಚಲು ಪೊಲೀಸರು ಮುಂದಾಗಿದ್ದಾರೆ.