ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್: ಯುವಕನಿಗೆ ಧರ್ಮದೇಟು!

ಮಂಗಳೂರು: ಮೂಲತಃ ಕಾರ್ಕಳ ನಿವಾಸಿ. ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ಓದುತ್ತಿರುವ ಸೈಯದ್ ಎಂಬಾತ ಓರ್ವ ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ. ಈ ವಿಚಾರವಾಗಿ ಹಿಂದೂ ಸಂಘಟನೆ ಕಾರ್ಯಕರ್ತರು ಆತನನ್ನು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಸೈಯದ್ ಮೊಬೈಲ್ ಕಿತ್ತುಕೊಂಡು ನೋಡಿದಾಗ ಆತನ ಮೊಬೈಲ್ ತುಂಬಾ ನೂರಾರು ಹುಡುಗಿಯರ ಜೊತೆಗಿನ ಸರಸ-ಸಲ್ಲಾಪದ ವಿಡಿಯೋಗಳು ಬೆಳಕಿಗೆ ಬಂದಿದ್ದು ತನ್ನ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸೈಯದ್ ಕೂಡ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ. ಹಿಂದೂ ಸಂಘಟನೆ ಕಾರ್ಯಕರ್ತರಾದ ಉಜಿರೆಯ ಮನೋಜ್ ಮತ್ತು ಪ್ರಜ್ವಲ್ ಗೌಡ ಎಂಬುವವರ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ.

error: Content is protected !!