ಬೆಂಗಳೂರು: ʻರೈಲ್ವೆ ಪರೀಕ್ಷೆಯಲ್ಲಿ ಮಂಗಳಸೂತ್ರ, ಜನಿವಾರ ತೆಗೆಯಬೇಕು ಎಂದು ಹೇಳಿರುವುದು ಸರಿಯಲ್ಲ. ಇದನ್ನು ಹಿಂಪಡೆಯಬೇಕುʼ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಗ್ರಹಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತ ಬಿಜೆಪಿ ಏನೋ ಹೇಳುತ್ತಿದೆ, ಇನ್ನೇನೋ ಮಾಡುತ್ತಿದೆ ಎಂದರು.
ಕೇಂದ್ರ ಸರಕಾರ ರೈಲ್ವೆ ಪರೀಕ್ಷೆಯಲ್ಲಿ ಜನಿವಾರ, ತಾಳಿ ಧರಿಸುವುದನ್ನು ನಿಷೇಧ ಮಾಡಿರುವ ಬಗ್ಗೆ ಕೇಳಿದಾಗ, ʻಧಾರ್ಮಿಕ ಸಂಕೇತಗಳಾಗಿ ಕಿವಿಯಲ್ಲಿ ಓಲೆ, ಮೂಗೂತಿ, ಮಂಗಳಸೂತ್ರ, ಜನಿವಾರ, ಉಡುದಾರ, ಹಣೆಬೊಟ್ಟು ಇರುತ್ತದೆ. ಇವುಗಳನ್ನು ಪರಿಶೀಲನೆ ಮಾಡಲಿ. ಆದರೆ ಅದನ್ನು ತೆಗೆಸುವುದು ಸರಿಯಲ್ಲ. ಇದರ ವಿರುದ್ಧ ಜನರೇ ಒಗ್ಗಟ್ಟಾಗಬೇಕುʼ ಎಂದರು.