ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಕಚೇರಿ ಮತ್ತು ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕ್ಲಿಫ್ ಹೌಸ್‍ಗೆ ಸೋಮವಾರ ಬಾಂಬ್ ಬೆದರಿಕೆ ಕರೆ ಬಂದಿದೆ.
ಬೆದರಿಕೆ ಸಂದೇಶ ಇಮೇಲ್ ಮೂಲಕ ಬಂದಿದೆ. ಕಳೆದ ಮೂರು ವಾರಗಳಿಂದ ರಾಜ್ಯದ ಹಲವು ಭಾಗಗಳಲ್ಲಿ ನಕಲಿ ಬಾಂಬ್ ಬೆದರಿಕೆ ಕರೆಗಳು ಬರುತ್ತಿವೆ.
ನಿನ್ನೆಯಷ್ಟೇ ಕೇರಳದ ಕೇರಳದ ತಿರುವನಂತಪುರಂ ಏರ್ ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ ಬಂದಿದೆ.
ಇದರ ಮುಂದುವರಿದ ಭಾಗವಾಗಿ ಇಂದು ಮುಖ್ಯಮಂತ್ರಿಗಳ ಕಚೇರಿ ಮತ್ತು ಮನೆಗೆ ಬಾಂಬ್ ಬೆದರಿಕೆ ಬಂದಿದೆ. ಸಚಿವಾಲಯ, ಕ್ಲಿಫ್ ಹೌಸ್ ಮತ್ತು ಸಾರಿಗೆ ಆಯುಕ್ತರ ಕಚೇರಿಯಲ್ಲಿ ತಪಾಸಣೆ ನಡೆಯುತ್ತಿದೆ. ಬಾಂಬ್ ನಿಷ್ಕ್ರಿಯ ದಳ ತನಿಖೆಯಲ್ಲಿ ತೊಡಗಿದೆ ಎಂದು ತಿರುವನಂತಪುರಂನಲ್ಲಿರುವ ಮುಖ್ಯಮಂತ್ರಿ ಕಚೇರಿ ಮಾಧ್ಯಮಗಳಿಗೆ ತಿಳಿಸಿದೆ.