
ಕುಡುಪುವಿನಲ್ಲಿ ನಡೆದ ಕೊಲೆ ಪ್ರಕರಣ ಜಿಲ್ಲೆಯ ಹೆಸರಿಗೆ ಕಳಂಕ ತಂದಂತಾಗಿದೆ ಆರೋಪಿಗಳನ್ನು ರಕ್ಷಿಸದೆ ಜೈಲಿಗಟ್ಟುವಂತೆ ದಕ್ಷಿಣ ಕನ್ನಡ ಜಿಲ್ಲಾ ವಕಪ್ ಸಲಹಾ ಸಮಿತಿ ಅಧ್ಯಕ್ಷ ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಆಗ್ರಹಿಸಿದ್ದಾರೆ.
ಇತ್ತೀಚೆಗೆ ಕುಡುಪುವಿನಲ್ಲಿ ಕ್ರಿಕೆಟ್ ಪಂದ್ಯಾಟದ ವೇಳೆ ಉತ್ತರ ಭಾರತ ಮೂಲದ ಕೂಲಿ ಕಾರ್ಮಿಕನೋರ್ವನ ಸಂಶಯಾಸ್ಪದ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಕುಡುಪುವಿನಲ್ಲಿ ನಡೆದ ಗುಂಪು ಹತ್ಯೆ ಖಂಡನೀಯವಾಗಿದೆ. ಇದು ಜಿಲ್ಲೆಯಲ್ಲಿ ಮರುಕಳಿಸಬಾರದು ಈ ಬಗ್ಗೆ ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಬೇಕು. ಕೊಲೆ ಯಾರು ಮಾಡಿದರು? ಇದರ ಹಿಂದಿರುವ ಶಕ್ತಿಗಳು ಯಾವುದು ಇದನ್ನು ಸೂಕ್ತವಾಗಿ ತನಿಖೆ ನಡೆಸಬೇಕು. ಆರೋಪಿಗಳು ಎಷ್ಟೇ ಪ್ರಭಾವಿತರಾಗಿದ್ದರೂ ಕೂಡಲೆ ಅವರನ್ನು ಬಂಧಿಸಬೇಕು. ಪ್ರಕರಣವನ್ನು ರಾಜಕೀಯಕ್ಕಾಗಿ ತೇಪೆ ಹಚ್ಚುವಂತೆ ಆಗಬಾರದು ಎಂದರು.
ಪೊಲೀಸರು ಕೂಲಂಕಶವಾಗಿ ತನಿಖೆ ನಡೆಸಿ ಪ್ರಕರಣ ಬಯಲಿಗೆಳೆಯಬಲ್ಲರೆಂಬ ಭರವಸೆ ಇದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಲ್ಲಿ ಚರ್ಚಿಸಲಾಗುವುದು. ರಾಜಕೀಯ ಪ್ರಭಾವಕ್ಕಾಗಿ ಪ್ರಕರಣ ದಾರಿ ತಪ್ಪುವುದಾದರೆ ಅದರ ವಿರುದ್ಧ ಪ್ರತಿಭಟಿಸಲು ಸಿದ್ಧತೆ ನಡೆಸಲಾಗುವುದು. ಆದುದರಿಂದ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಸಂಬಂಧ ಪಟ್ಟವರಿಗೆ ತಿಳಿಸಲಾಗಿದೆ ಬಿ ಎ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್ ಪ್ರತಿಕ್ರಿಯಿಸಿದ್ದಾರೆ.