ಮಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ನಡೆದ ಭೀಕರ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ಮತ್ತು ಒಗ್ಗಟ್ಟಿನ ಸಂಕೇತವಾಗಿ ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಲಾಲ್ ಬಾಗ್ ಮಹಾತ್ಮ ಗಾಂಧಿ ಪ್ರತಿಮೆ ಎದುರುಗಡೆ ನಿನ್ನೆ ಸಂಜೆ ಆರು ಗಂಟೆಗೆ ಮೊಂಬತ್ತಿ ನಡಿಗೆ ಏರ್ಪಡಿಸಲಾಯಿತು.
ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ವೈಫಲ್ಯದ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ನವಾಝ್ ಇಬ್ರಾಹಿಂ, ಮಾಜಿ ಸಚಿವ ರಮಾನಾಥ ರೈ, ಮಾಜಿ ಶಾಸಕ ಜೆಆರ್ ಲೋಬೋ, ಶಾಸಕ ಹರೀಶ್ ಕುಮಾರ್, ಮುಖಂಡರಾದ ಪದ್ಮರಾಜ್ ಪೂಜಾರಿ ಮತ್ತಿತರರು ಇದ್ದರು.