ತೋಕೂರು: ರಿಕ್ಷಾ-ಕಾರ್ ಡಿಕ್ಕಿ; ಇಬ್ಬರಿಗೆ ಗಾಯ

ಮೂಲ್ಕಿ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೆಯಂಗಡಿ 10ನೇ ತೋಕೂರು ಬಳಿ ಕಾರು ಮತ್ತು ರಿಕ್ಷಾ ಡಿಕ್ಕಿಹೊಡೆದು ಮೂವರು ಗಂಭೀರ ಗಾಯಗೊಂಡಿರುವ ಘಟನೆ ಇಂದು ನಡೆದಿದೆ.


ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಓರ್ವ ಮಹಿಳೆಯ ತಲೆಗೆಗೆ ಗಂಭೀರ ಗಾಯವಾಗಿದ್ದು, ಆಟೊ ರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ರವಾನಿಸಲಾಗಿದೆ. ರಿಕ್ಷಾ ಉಡುಪಿ ಕಡೆಯಿಂದ ಹಳೆಯಂಗಡಿ ಮಾರ್ಗವಾಗಿ ಕಿನ್ನಿಗೋಳಿ ಕಡೆ ಸಂಚರಿಸುತ್ತಿತ್ತು. ವಿರುದ್ಧ ದಿಕ್ಕಿನಲ್ಲಿ ಬಂದ ಕಾರ್ ಡಿಕ್ಕಿ ಹೊಡೆದಿದೆ.

error: Content is protected !!