
ರಾಮನಗರ: ಮಾಜಿ ಸಂಸದ ಡಿಕೆ ಸುರೇಶ್ ಅವರ ಪತ್ನಿ ಎಂದು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಮ್ ನಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆಯ ವಿರುದ್ಧ ರಾಮನಗರ ಸೆನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪವಿತ್ರಾ ಎಂಬ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಸರ್ಕಾರಿ ಶಾಲೆ ಶಿಕ್ಷಕಿಯಾಗಿದ್ದು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಕನಕಪುರದ ದೊಡ್ಡಾಲಹಳ್ಳಿ ಗ್ರಾಮದ ಈ ಮಹಿಳೆ ಮೈಸೂರಿನಲ್ಲಿ ವಾಸವಾಗಿದ್ದು ನೆರೆಮನೆಯವರ ಜೊತೆಗೆ ಗಲಾಟೆ ಮಾಡಿಕೊಂಡಿದ್ದಳು. ಮಹಿಳೆ ಇನ್ ಸ್ಟಾಗ್ರಾಮ್ ನಲ್ಲಿ pavithra256 ಎಂಬ ಹೆಸರಿನಲ್ಲಿ ಹಾಗೂ ಫೇಸ್ಬುಕ್ ನಲ್ಲಿ PavithraDksureshDoddalahalli ಎಂಬ ಹೆಸರಿನಲ್ಲಿ ಖಾತೆ ಹೊಂದಿರುವ ಎಪ್ರಿಲ್ 8ರಂದು ವಿಡಿಯೋ ಪೋಸ್ಟ್ ಮಾಡಿದ್ದಳು. ಸುರೇಶ್ ಅವರ ಚಿತ್ರದೊಂದಿಗೆ ತನ್ನ ಚಿತ್ರ ಜೊಡಿಸಿ ಎಡಿಟ್ ಮಾಡಿದ ಫೋಟೋವನ್ನು ಸಹ ಹಾಕಿಕೊಂಡಿದ್ದಳು. ಸುರೇಶ್ ಮೂರು ಸಲ ಎಂ.ಪಿ. ಆಗಿ ಯಾರು ಮಾಡಲಿಕ್ಕಾಗದ ಒಳ್ಳೆಯ ಕೆಲಸಗಳನ್ನು ಮಾಡಿದ್ದಾರೆ. ಇಂತಹವರನ್ನು ನನ್ನ ಗಂಡ ಎಂದು ಹೇಳಿಕೊಳ್ಳಲು ಖುಷಿಪಡುತ್ತೇನೆ ಎಂದು ವಿಡಿಯೋ ಹರಿಬಿಟ್ಟಿದ್ದಳು.