ಸುರತ್ಕಲ್: ಗುರುವಾರ ರಾತ್ರಿ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕಿನ್ನಿಪದವು ಜಂಕ್ಷನ್ ನಲ್ಲಿ ನಡೆದಿದ್ದ ರೌಡಿ ಶೀಟರ್ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಿನ್ನೆಲೆಯಲ್ಲಿ ಮೇ 2 ಮುಂಜಾನೆ 6 ಗಂಟೆಯಿಂದ ಮೇ 6 ಮುಂಜಾನೆ 6 ಗಂಟೆಯವರೆಗೆ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಹೊರಡಿಸಿ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಹೊರಡಿಸಿದ್ದಾರೆ.
ಯಾವುದೇ ಸಭೆ ಸಮಾರಂಭ ಗುಂಪು ಗೂಡದಂತೆ ತಡೆಯಲು ಹೆಚ್ಚುವರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ರಾತ್ರಿ ಸುಹಾಸ್ ಶೆಟ್ಟಿ ಶವವಿದ್ದ ಎಜೆ ಆಸ್ಪತ್ರೆ ಮುಂಭಾಗದಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿ ಪೊಲೀಸ್ ಇಲಾಖೆ ಮತ್ತು ಸರಕಾರವೇ ಘಟನೆಗೆ ಕಾರಣ ಎಂದು ಆರೋಪಿಸಿದ್ದಾರೆ. ಪೊಲೀಸ್ ಭದ್ರತೆ ಹೆಚ್ಚಿಸಿ ಪರಿಸ್ಥಿತಿ ತಿಳಿಗೊಳಿಸಲಾಗಿದೆ.