ಕಡಬ: ಬಜ್ಪೆ ಠಾಣಾ ವ್ಯಾಪ್ತಿಯಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆ ಬರ್ಬರ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ಇಂದು ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಬಳಿಕ ಸುಬ್ರಹ್ಮಣ್ಯ-ಉಪ್ಪಿನಂಗಡಿ ರಾಜ್ಯ ಹೆದ್ದಾರಿ ತಡೆ ನಡೆಸಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಹತ್ಯೆ ಖಂಡಿಸಿ ವಿಶ್ವ ಹಿಂದೂ ಪರಿಷತ್ ನೀಡಿದ ಕರೆಯಂತೆ ಕಡಬ ಪೇಟೆಯ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ. ಬಸ್‌ಗಳು ರಸ್ತೆಗಿಳಿಯಲಿಲ್ಲ. ವಾಹನಗಳ ಸಂಚಾರ ವಿರಳವಾಗಿದೆ. ಕಡಬ ಪೋಲಿಸರು ಬಂದೋಬಸ್ತ್ ಕಲ್ಪಿಸಿದ್ದಾರೆ.