ಶಿವಮೊಗ್ಗ: ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದ್ದು ಶಿವಮೊಗ್ಗ ಜಿಲ್ಲೆಯ ಮೂವರು ವಿದ್ಯಾರ್ಥಿಗಳು 625ಕ್ಕೆ 625ಕ್ಕೆ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆಯ ನಮನ.ಕೆ, ರಾಮೃಕೃಷ್ಣ ವಿದ್ಯಾಲಯದ ನಿತ್ಯಾ ಎಂ ಕುಲಕರ್ಣಿ, ಆದಿಚುಂಚನಗಿರಿ ಶಾಲೆಯ ಸಹಿಷ್ಣು.ಎನ್ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮ ಸಾಧನೆ ಮುಂದುವರೆಸಿರುವ ಶಿವಮೊಗ್ಗ ಈ ಬಾರಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಕಳೆದ ವರ್ಷ ಮೂರನೇ ಸ್ಥಾನದಲ್ಲಿ ಇತ್ತು.