ಬೆಳ್ತಂಗಡಿ :ಮನೆಯ ಬಳಿಯೇ ಆಟವಾಡುತ್ತಿದ್ದಂತಹ ವೇಳೆಯೇ ಬಾಲಕನೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ.
ಈತ 9ನೇ ತರಗತಿ ಮುಗಿಸಿ 10ನೇ ತರಗತಿಗೆ ಪ್ರವೇಶಿಸಲು ಸಿದ್ಧತೆ ನಡೆಸುತ್ತಿದ್ದು , ಮೃತನನ್ನು ಧರ್ಮಸ್ಥಳದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಗೋವಿಂದ ಗೌಡ ಅವರ ಪುತ್ರ ಪ್ರಥಮ್ (16) ಎಂದು ಗುರುತಿಸಲಾಗಿದೆ.ಮಧ್ಯಾಹ್ನದ ಹೊತ್ತಿಗೆ ಆಟವಾಡುತ್ತಿದ್ದ ಸಮಯದಲ್ಲೇ ಎದೆನೋವು ಕಾಣಿಸಿಕೊಂಡಿದ್ದು, ಪ್ರಥಮ್ ಅವರನ್ನು ತಕ್ಷಣ ಉಜಿರೆಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಪ್ರಯತ್ನಗಳ ಹೊರತಾಗಿಯೂ ಅವರನ್ನು ಉಳಿಸಲಾಗಲಿಲ್ಲ.
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.