ಮೇ 10ಕ್ಕೆ ನವೋದಯ ಸ್ವ-ಸಹಾಯ ಸಂಘದ “ರಜತ ಸಂಭ್ರಮ”

“ಒಂದೂವರೆ ಲಕ್ಷ ಸಂಘದ ಮಹಿಳೆಯರು ಸಮವಸ್ತ್ರದಲ್ಲಿ ಭಾಗಿ“

-ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್

ಮಂಗಳೂರು:
“ಮೇ 10ರಂದು ಗೋಲ್ಡ್ ಫಿಂಚ್ ಸಿಟಿಯಲ್ಲಿ ನವೋದಯ ಸ್ವಸಹಾಯ ಗುಂಪುಗಳ ರಜತ ಸಂಭ್ರಮ ಕಾರ್ಯಕ್ರಮ ನಡೆಯಲಿರುವುದು. ಸ್ವಸಂಘದ ಒಂದೂವರೆ ಲಕ್ಷ ಮಂದಿ ಸದಸ್ಯೆಯರು ಸಮವಸ್ತ್ರ ಧರಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಡೆಸಲು ಸಕಲ ವ್ಯವಸ್ಥೆಯನ್ನೂ ಮಾಡಲಾಗಿದೆ” ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.
“ಅಂದು ದೇಶದಲ್ಲೇ ಮೊದಲ ಬಾರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಘದ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಪಾಲ್ಗೊಳ್ಳಲಿದ್ದು ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಭಾಗವಹಿಸಲಿದ್ದಾರೆ. ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸ್ಪೀಕರ್ ಯು.ಟಿ. ಖಾದರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವೀರೇಂದ್ರ ಹೆಗ್ಗಡೆ, ಪೇಜಾವರ ಮಠಾಧೀಶರು, ಸಹಕಾರಿ ಸಚಿವ ಕೆಎನ್ ರಾಜಣ್ಣ, ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್, ಶಿವಾನಂದ ಪಾಟೀಲ್, ಆರ್.ಬಿ.ತಿಮ್ಮಾಪುರ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ, ಲಕ್ಷ್ಮಣ ಸವದಿ, ಜಿ.ಟಿ. ದೇವೇಗೌಡ, ಡಾ.ಉದಯ್ ಶಂಕರ್ ಆವಸ್ತಿ, ಮುರುಗೇಶ್ ನಿರಾಣಿ, ಸುನೀಲ್ ಕುಮಾರ್, ಶಿವರಾಮ್ ಹೆಬ್ಬಾರ್ ,ಬ್ರಜೇಶ್ ಚೌಟ್, ಕೋಟ ಶ್ರೀನಿವಾಸ್ ಪೂಜಾರಿ, ಡಾ.ಪ್ರಕಾಶ್ ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.


“ಬೇರೆ ಬೇರೆ ಜಿಲ್ಲೆಗಳಿಂದ ಸುಮಾರು 3000 ಬಸ್ಸುಗಳಲ್ಲಿ ಮಹಿಳೆಯರು ನಗರಕ್ಕೆ ಬರಲಿದ್ದು ಪ್ರತೀ ಬಸ್ ಗಳಲ್ಲಿ ಇಬ್ಬರು ಪುರುಷ ಸಿಬ್ಬಂದಿಯನ್ನು ನೇಮಕ ಮಾಡಲಾಗುವುದು. ತಿಂಡಿ, ಊಟೋಪಚಾರದ ವ್ಯವಸ್ಥೆ ಮಾಡಲಿದ್ದು ಎಲ್ಲ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಶ್ರಮಿಸಲಾಗುವುದು” ಎಂದರು.
ಪತ್ರಿಕಾಗೋಷ್ಟಿಯಲ್ಲಿ ಬ್ಯಾಂಕ್ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ, ಕಾರ್ಯಾಧ್ಯಕ್ಷ ಶಶಿಕುಮಾರ್ ರೈ ಬೊಳ್ಯೊಟ್ಟು, ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಎಸ್. ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

error: Content is protected !!