“ಸಿಎಂ ಸಿದ್ದರಾಮಯ್ಯನನ್ನು ಕೊಂ *ದರೆ ನೆಮ್ಮದಿ” – ಕಾರ್ಕಳದ ಯುವಕ ವಶಕ್ಕೆ

ಮಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿಯಾಗಿ ಪೋಸ್ಟ್‌ ಮಾಡಿದ ಆರೋಪಿಯನ್ನು ಪೋಲಿಸರು ಬಂಧಿಸಿದ್ದಾರೆ.


ಬೆಂಗಳೂರಿನಲ್ಲಿ ಹೋಂ-ಗಾರ್ಡ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ , ಕಾರ್ಕಳದ‌ ಸಾಣೂರಿನ ಸಂಪತ್‌ ಸಾಲ್ಯಾನ್ ಬಂಧಿತ ಆರೋಪಿಯಾಗಿದ್ದು, ಈತ “ಸಿಎಂ ಸಿದ್ದರಾಮಯ್ಯನನ್ನು ಕೊಂದರೆ ನೆಮ್ಮದಿ ” ಎಂದು ತನ್ನ ಸಾಮಾಜಿಕ ಖಾತೆಯಲ್ಲಿ ಪೋಸ್ಟ್‌ ಹಾಕಿದ್ದ ಎಂದು ಆರೋಪಿಸಲಾಗಿದೆ.
ಆರೋಪಿಯ ವಿರುದ್ಧ ಸೂರಜ್‌ ಶೆಟ್ಟಿ ನಕ್ರೆ ಈ ಕುರಿತಾಗಿ ಪೋಲೀಸ್‌ ಠಾಣೆಗೆ ದೂರನ್ನು ನೀಡಿದ್ದರು.

error: Content is protected !!