ಹುಬ್ಬಳ್ಳಿ: ಲಾರಿ ಢಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಕಿರೇಸೂರು ಕ್ರಾಸ್ ಬಳಿ ಇಂದು ಸಂಭವಿಸಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು.
ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.