ಮಂಗಳೂರು: ಫೇಸ್‌ಬುಕ್‌ನಲ್ಲಿ ಹಿಂಸಾಚಾರವನ್ನು ಪ್ರಚೋದಿಸುವ, ಶಾಂತಿ ಭಂಗವನ್ನುಂಟು ಮಾಡುವ ಸಲುವಾಗಿ ಕಾಂಗ್ರೆಸ್ ನಾಯಕರ ವಿರುದ್ಧ ಉದ್ದೇಶಪೂರ್ವಕವಾಗಿ ಮಾನಹಾನಿಕರ ಮತ್ತು ಪ್ರಚೋದನಕಾರಿಯಾಗಿ ಪೋಸ್ಟ್ ಮಾಡಿರುವ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಹಾಗೂ ಹಿಂದೂ ಕಾರ್ಯಕರ್ತ ವಿಕಾಸ್ ಪಿ. ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸಿ ಎನ್ಎಸ್‌ಯುಐ ಪೊಲೀಸ್ ಆಯುಕ್ತರಿಗೆ ದೂರು ನೀಡಿದೆ.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಪರವಾಗಿ ಎನ್ ಎಸ್ ಯುಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ದೂರು ಸಲ್ಲಿಸಿದ್ದಾರೆ.
ವಿಕಾಸ್ ಪಿ. ಅವರು ಬಿಜೆಪಿ ಪಕ್ಷದ ಬಲಪಂಥೀಯ ನಾಯಕ ಎಂದು ಹೇಳಿಕೊಳ್ಳುವ ಫೇಸ್‌ಬುಕ್ ಖಾತೆಯನ್ನು ಹೊಂದಿದ್ದು, ಅದರಲ್ಲಿ ಅವರಿಗೆ 5000 ಫ್ರೆಂಡ್ಸ್ ಮತ್ತು 3500 ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿದ್ದಾರೆ. ಅದೇ ರೀತಿ ಅದೇ ರೀತಿ ಶಾಸಕ ಹರೀಶ್ ಪೂಂಜಾ 86,000 ಕ್ಕೂ ಹೆಚ್ಚು ಫ್ರೆಂಡ್ ಮತ್ತು ಹೆಚ್ಚಿನ ಸಂಖ್ಯೆಯ ಫೋಲೋವರ್ಸ್ ಹೊಂದಿರುವ ಫೇಸ್‌ಬುಕ್ ಖಾತೆಯನ್ನು ಹೊಂದಿದ್ದಾರೆ
04.05.2025 ರಂದು ಇವರು ವಧಾರ್ಮಿಕ ಗುಂಪುಗಳು ಮತ್ತು ಸಮುದಾಯಗಳ ನಡುವೆ ಅಶಾಂತಿ, ದ್ವೇಷ ಮತ್ತು ಕೆಟ್ಟ ಭಾವನೆಯನ್ನು ಉತ್ತೇಜಿಸುವ ಸಲುವಾಗಿ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಮಾನನಷ್ಟ ಮತ್ತು ಪ್ರಚೋದನಕಾರಿ ಪೋಸ್ಟ್ ಅನ್ನು ಪೋಸ್ಟ್ ಮಾಡಿದ್ದಾರೆ. ಇಂತಹ ಸುಳ್ಳು ಮಾಹಿತಿ/ವದಂತಿಗಳಿಂದ ಸಮಾಜದಲ್ಲಿ ಅಪರಾಧಗಳು ಮತ್ತು ಗುಂಪುಗಳ ನಡುವಿನ ಹಿಂಸಾಚಾರಕ್ಕೆ ಕಾರಣವಾಗುತ್ತದೆ. ಅಲ್ಲದೆ ಇದು ಸಮಾಜ ವಿರೋಧಿ ಶಕ್ತಿಗಳನ್ನು ಪ್ರಚೋದಿಸುತ್ತದೆ. ಇದರಿಂದ ನಮ್ಮ ನಾಯಕರಾದ ಬಿ. ರಾಮನಾಥ ರೈ, ಬಿ.ಕೆ. ಹರಿಪ್ರಸಾದ್, ಅಭಯಚಂದ್ರ ಜೈನ್, ಮಂಜುನಾಥ ಭಂಡಾರಿ ಮತ್ತು ಹರೀಶ್ ಕುಮಾರ್ ಅವರ ಜೀವಕ್ಕೆ ಅಪಾಯವನ್ನುಂಟು ಮಾಡುವ ಸಾಧ್ಯತೆ ಇದೆ ಎಂದು ಸುಹಾನ್ ಆಳ್ವಾ ಆರೋಪಿಸಿದ್ದು, ವಿಕಾಸ್ ಪಿ. ಹಾಗೂ ಹರೀಶ್ ಪೂಂಜಾ ವಿರುದ್ಧ ಕ್ರಮ ಕೈಗೊಳ್ಳುವಂತೆ ಪ್ರತ್ಯೇಕವಾಗಿ ದೂರು ಸಲ್ಲಿಸಿದ್ದಾರೆ.
ಅಲ್ಲದೆ ಪೋಸ್ಟ್‌ನ ಸ್ಕ್ರೀನ್‌ಶಾಟ್ ಪ್ರತಿಯನ್ನು ದೂರಿನೊಂದಿಗೆ ಲಗತ್ತಿಸಿದ್ದಾರೆ.