ಮಂಗಳೂರು: ಕುದ್ರೋಳಿಯ ಶಿವಗಿರಿ ಅಪಾರ್ಟ್‌ಮೆಂಟ್‌ನಲ್ಲಿ ಇಂದು ಅಚಾನಕ್ ಬೆಂಕಿ ಅವಘಡ ಸಂಭವಿಸಿದ್ದು, ವೃದ್ಧರೊಬ್ಬರನ್ನು ರಕ್ಷಿಸಲಾಗಿದೆ.
ಅಪಾರ್ಟ್‌ಮೆಂಟ್‌ನ ಮೂರನೇ ಮಹಡಿಯಲ್ಲಿ ಅಗ್ನಿ ಕಾಣಿಸಿದ್ದು, ಪೂರ್ತಿ ಕಟ್ಟಡ ದಟ್ಟ ಹೊಗೆಯಿಂದ ಆವರಿಸಿಕೊಂಡಿತ್ತು. ಮಾಹಿತಿ ಪಡೆದ ಸ್ಥಳಕ್ಕೆ ಅಗ್ನಿಶಾಮಕ ತಂಡ ಮೊದಲು ಹೊಗೆಯಲ್ಲಿ ಸಿಲುಕಿದ್ದ ವೃದ್ಧರೊಬ್ಬರನ್ನು ರಕ್ಷಿಸಿ, ಬೆಂಕಿ ನಂದಿಸುವ ಕಾರ್ಯ ಮುಂದುವರಿಸಿದ್ದಾರೆ. ಮಂಗಳೂರು ನಗರ ಪೊಲೀಸರು ಆಗಮಿಸಿದ್ದಾರೆ.