ಲಾರಿ-ಸ್ಕೂಟರ್‌ ಅಪಘಾತ: ವ್ಯಕ್ತಿ ಸಾವು

ಕಾಸರಗೋಡು: ಲಾರಿ ಮತ್ತು ಸ್ಕೂಟರ್ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ಸವಾರ ಮೃತಪಟ್ಟ ಘಟನೆ ಇಂದು  ಮಧ್ಯಾಹ್ನ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ತೂಮಿನಾಡು ಎಂಬಲ್ಲಿ ನಡೆದಿದೆ.

ಉಪ್ಪಳ ಐಲ ನಿವಾಸಿ ಕಲ್ಪೇಶ್ ಯು.(35) ಮೃತಪಟ್ಟವರು.

 

ಇವರು ಉಪ್ಪಳದಿಂದ ಕೆ.ಸಿ ರೋಡ್ ನ ಪೇಪರ್ ಮಿಲ್ ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಲ್ಲೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹವನ್ನು ಮಂಗಲ್ಪಾಡಿ ಸರಕಾರಿ ಆಸ್ಪತ್ರೆ ಶವಾಗಾರದಲ್ಲಿರಿಸಲಾಗಿದೆ.

ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

error: Content is protected !!