ಮಂಗಳೂರು: ಮಂಗಳೂರು ನಗರದ ಬಜ್ಪೆ ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಬಜ್ಪೆ ಹೆಡ್ ಕಾನ್ಸ್ಟೇಬಲ್ ರಶೀದ್ ಪರೋಕ್ಷವಾಗಿ ಕೈಜೋಡಿಸಿದ್ದಾರೆ ಎಂದು ಹಿಂದೂ ಸಂಘಟನೆಗಳು ಆರೋಪ ಮಾಡಿತ್ತು. ಈ ಆರೋಪದ ಬೆನ್ನಲ್ಲೆ ಸಾಮಾಜಿಕ ಜಾಲತಾಣದಲ್ಲಿ ಹೆಡ್ ಕಾನ್ಸ್ಟೇಬಲ್ ರಶೀದ್ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಹಾಕಲಾಗಿದ್ದು ಈ ಸಂಬಂಧ ಹೆಡ್ ಕಾನ್ಸ್ಟೇಬಲ್ ರಶೀದ್ ಅವರು ಬಜ್ಪೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ.
ಹಿಂದೂ ಸಂಘಟನೆ ಮುಖಂಡ ಮೂಡಬಿದ್ರೆಯ ಸಮಿತ್ ರಾಜ್ ದರೆಗುಡ್ಡೆ, ಹಿಂದೂ ಜಾಗರಣ ವೇದಿಕೆ ಮುಖಂಡ ಕೆ.ಟಿ.ಉಲ್ಲಾಸ್ ಎಂಬುವರು ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ವಿನಾಕಾರಣ ನನ್ನ ಹೆಸರು ಎಳೆದು ತಂದಿದ್ದಾರೆ. ಯಾವುದೇ ಆಧಾರ ಇಲ್ಲದೆ ನನ್ನ ಹೆಸರು ಹಾಕಿ ಅವಹೇಳನ ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ತೇಜೋವಧೆ ಮಾಡಲಾಗುತ್ತಿದೆ ಎಂದು ರಶೀದ್ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.