ಜಮ್ಮು ಕಾಶ್ಮೀರ: ಪಹಲ್ಗಾಮ್ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರದಲ್ಲಿನ ಉಗ್ರರ ಅಡಗುತಾಣಗಳ ಮೇಲೆ ಏರ್‌ಸ್ಟ್ರೈಕ್ ನಡೆಸಿದೆ. ಶ್ರೀನಗರದಿಂದ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿದೆ.
ಆಪರೇಷನ್ ಸಿಂಧೂರ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ. ರಫೇಲ್ ಯುದ್ಧ ವಿಮಾನಗಳನ್ನು ಬಳಸಿ ಏರ್‌ಸ್ಟ್ರೈಕ್ ನಡೆದಿದೆ. ಈ ದಾಳಿಗಳಲ್ಲಿ ಮೂವತ್ತಕ್ಕೂ ಹೆಚ್ಚು ಉಗ್ರರು ಮೃತಪಟ್ಟಿರುವುದಾಗಿ ಕೆಲ ವರದಿಗಳು ತಿಳಿಸಿವೆ.
ಭಾರತ ಮಧ್ಯರಾತ್ರಿ ನಡೆಸಿದ ದಾಳಿಯಲ್ಲಿ ಎಂಟು ಪಾಕಿಸ್ತಾನಿಗಳು ಸಾವನ್ನಪ್ಪಿದ್ದಾರೆ ಮತ್ತು 35 ಜನರು ಗಾಯಗೊಂಡಿದ್ದಾರೆ ಎಂದು ಇಂಟರ್-ಸರ್ವೀಸಸ್ ಪಬ್ಲಿಕ್ ರಿಲೇಶನ್ಸ್ ಮಹಾನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಹೇಳಿದ್ದಾರೆ.
ಬೆಳಿಗ್ಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, “ಭಾರತವು ಆರು ಸ್ಥಳಗಳಲ್ಲಿ ವಿವಿಧ ಶಸ್ತ್ರಾಸ್ತ್ರಗಳೊಂದಿಗೆ ಒಟ್ಟು 24 ಇಂಪ್ಯಾಕ್ಟ್‌ಗಳನ್ನು ವರದಿ ಮಾಡಿದೆ. ನಮ್ಮ ಹಾನಿಯ ಅಂದಾಜಿನ ಆಧಾರದ ಮೇಲೆ ಈ ಆರು ಸ್ಥಳಗಳಲ್ಲಿ ಎಂಟು ಪಾಕಿಸ್ತಾನಿಗಳು ಸಾವನ್ನಪ್ಪಿದ್ದಾರೆ, 35 ಮಂದಿ ಗಾಯಗೊಂಡಿದ್ದಾರೆ ಮತ್ತು ಇಬ್ಬರು ಕಾಣೆಯಾಗಿದ್ದಾರೆ” ಎಂದು ಹೇಳಿದ್ದಾರೆ.