ಬೆಳ್ತಂಗಡಿ: ವ್ಯಕ್ತಿಯೋರ್ವರ ಮನೆಯಲ್ಲಿ ಕಾರು ಚಾಲಕನಾಗಿ ದುಡಿಯುತ್ತಿದ್ದ ವ್ಯಕ್ತಿ ಅವರ ಅಪ್ರಾಪ್ತ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪರಿಣಾಮ ಆಕೆ ಗರ್ಭ ಧರಿಸಿದ ಕಳವಳಕಾರಿ ಕೃತ್ಯದ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಶಿರ್ಲಾಲು ಗ್ರಾಮದ ಸನತ್ (28) ಪ್ರಕರಣದ ಆರೋಪಿಯಾಗಿದ್ದು, ಈತನನ್ನು ವೇಣೂರು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಆರೋಪಿ ಸನತ್ ಬಾಲಕಿಯ ತಂದೆಯ ಕಾರಿನಲ್ಲಿ ಚಾಲಕನಾಗಿ ದುಡಿಯುತ್ತಿದ್ದು, ಬಾಲಕಿ ಜೊತೆಗೆ ಸಲುಗೆಯಿಂದ ಇರುತ್ತಿದ್ದ. ಬಾಲಕಿಯ ಜನ್ಮದಿನದ ಆಚರಣೆಗೆಂದು ಆತನನ್ನು ಮನೆಯವರು ಕರೆಸಿದ್ದು, ಅಂದು ರಾತ್ರಿ ಅಲ್ಲಿಯೇ ಉಳಿಸಿಕೊಂಡಿದ್ದ. ಅಂದು ರಾತ್ರಿ ಬಾಲಕಿಯ ಮೇಲೆ ಬಲಾತ್ಕಾರದಿಂದ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಆ ಬಳಿಕವೂ ಆತ ಬಾಲಕಿಗೆ ಬೆದರಿಕೆ ಹಾಕಿ ನಿರಂತರ ಅತ್ಯಾಚಾರ ಎಸಗಿದ ಪರಿಣಾಮ ಆಕೆ ಗರ್ಭ ಧರಿಸಿದ್ದು, ಇದೀಗ ಬಾಲಕಿ ಆರೋಪಿ ಸನತ್ ವಿರುದ್ಧ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆರೋಪಿ ಸನತ್‌ನನ್ನು ಪೊಲೀಸರು ಬಂಧಿಸಿದ್ದಾರೆ. .