ಬೆಂಗಳೂರು: ಅಕ್ರಮ ಗಣಿಗಾರಿಕೆಯಲ್ಲಿ ಶಾಸಕ ಜನಾರ್ಧನ ರೆಡ್ಡಿಗೆ 7 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿರುವ ಹಿನ್ನಲೆಯಲ್ಲಿ ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.
ಓಬಳಾಪುರಂ ಅಕ್ರಮ ಗಣಿಗಾರಿಕೆ ಹಾಗೂ ಗಡಿ ಒತ್ತುವರಿ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ಧನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿದ್ದು 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದರ ಹಿನ್ನಲೆಯಲ್ಲಿ ಜನಾರ್ಧನ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ. ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್ ತೀರ್ಪು ಪ್ರಕಟಿಸಿತ್ತು. ಇದರ ಬೆನ್ನಲ್ಲೇ ಕರ್ನಾಟಕ ವಿಧಾನಸಭೆ ಕ್ರಮ ಕೈಗೊಂಡಿದೆ. ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮೇ.6ರಿಂದ ಜಾರಿಗೆ ಬರುವಂತೆ ಜನಾರ್ಧನ ರೆಡ್ಡಿಯನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.