ಜಮ್ಮು ಕಾಶ್ಮೀರ: ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಮೂಲಕ ಭಾರತಕ್ಕೆ ನುಸುಳಲು ಯತ್ನಿಸುತ್ತಿದ್ದ ಏಳು ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದ್ದು, ಒಂದು ರೇಂಜರ್ಸ್ ಪೋಸ್ಟ್ ಅನ್ನೂ ನಾಶಗೊಳಿಸಲಾಗಿದೆ ಎಂದು ಶುಕ್ರವಾರ ಗಡಿ ಭದ್ರತಾ ಪಡೆ ತಿಳಿಸಿದೆ. ಗುರುವಾರ ತಡರಾತ್ರಿ ಸಾಂಬಾ ಸೆಕ್ಟರ್‌ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಚಲನವಲನವನ್ನು ಗಮನಿಸಿ ಸೇನೆಯು ಕಾರ್ಯಾಚರಣೆ ನಡೆಸಿದೆ.
ಒಳ ನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಲಾಗಿದ್ದು, ಈ ವೇಳೆ ಏಳು ಮಂದಿ ಭಯೋತ್ಪಾದಕರನ್ನು ಹತ್ಯೆಗೈಯ್ಯಲಾಗಿದೆ. ಅಲ್ಲದೆ, ಪಾಕಿಸ್ತಾನದ ಧಂಧಾರ್ ರೇಂಜರ್ಸ್ ಪೋಸ್ಟ್ ಗೆ ತೀವ್ರ ಹಾನಿಯನ್ನೂ ಮಾಡಲಾಗಿದೆ ಎಂದು ಭದ್ರತಾಪಡೆ ಹೇಳಿದೆ.