ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿಯಲ್ಲಿ ಪಾಕಿಸ್ತಾನಿ ಸೇನಾ ಪಡೆಗಳು ನಡೆಸಿದ ಶೆಲ್ ದಾಳಿಯಲ್ಲಿ ಓರ್ವ ಮಹಿಳೆ ಮೃತಪಟ್ಟು, ಆಕೆಯ ಕುಟುಂಬದ ಇನ್ನಿಬ್ಬರು ಸದಸ್ಯರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಪಾಕಿಸ್ತಾನದ ಶೆಲ್ ದಾಳಿಯಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸುತ್ತಿದ್ದ ವೇಳೆ ಕಾರೊಂದರ ಮೇಲೆ ಅಪ್ಪಳಿಸಿದ ಶೆಲ್‌ನಿಂದಾಗಿ ಒಂದೇ ಕುಟುಂಬದ ಮೂವರು ಗಾಯಗೊಂಡಿದ್ದು ತಕ್ಷಣವೇ ಅವರನ್ನೆಲ್ಲ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಗಾಯಾಳುಗಳ ಪೈಕಿ ನರ್ಗೀಸ್ ಬೇಗಂ ಎಂಬ ಮಹಿಳೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.