ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ 8 ಮಂದಿ ಬಂಧಿತ ಆರೋಪಿಗಳನ್ನು ಮಂಗಳೂರಿನ ಜೈಲಿಗೆ ಹಾಕಲಾಗಿದ್ದು, ಇನ್ನುಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.
ಅಬ್ದುಲ್ ಸಫ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮಿರ್, ಕಲಂದರ್ ಶಾಫಿ, ಆದಿಲ್ ಮೆಹರೂಫ್, ನಾಗರಾಜ್ ಎಂ., ಮೊಹಮ್ಮದ್ ರಿಜ್ವಾನ್ ಮತ್ತು ರಂಜಿತ್‌ನನ್ನು ನಿನ್ನೆ ಮಂಗಳೂರಿನ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಲಯದ ಆದೇಶದಂತೆ ನ್ಯಾಯಾಂಗ ಬಂಧನಕ್ಕಾಗಿ ಮಂಗಳೂರು ಜೈಲಿಗೆ ಹಾಕಲಾಗಿದೆ.
ಸುಹಾಸ್ ಶೆಟ್ಟಿ ಮೇ 1ರಂದು ರಾತ್ರಿ ತನ್ನ ಗೆಳೆಯರೊಂದಿಗೆ ಕಾರಿನಲ್ಲಿ ಹೋಗುತ್ತಿದ್ದಾಗ ಬಜ್ಪೆ ಕಿನ್ನಿಪದವು ಎಂಬಲ್ಲಿ ಅಟಕಾಯಿಸಿ ಆರೋಪಿಗಳು ಅಪಘಾನ ನಡೆಸಿ ಮಾರಕಾಯುಧಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಇನ್ನಿಬ್ಬರು ಆರೋಪಿಗಳಿಗೆ ಶೋಧ ಮುಂದುವರಿದಿದೆ.