ಪಾಕಿಸ್ತಾನ ಶೆಲ್‌ ದಾಳಿಗೆ ಜಮ್ಮು& ಕಾಶ್ಮೀರದ ಸರ್ಕಾರಿ ಅಧಿಕಾರಿ ಸಾವು

ಜಮ್ಮು: ಪಾಕಿಸ್ತಾನದ ಶೆಲ್‌ ದಾಳಿಯಿಂದ ಜಮ್ಮು ಮತ್ತು ಕಾಶ್ಮೀರದ ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಮೃತಪಟ್ಟ ಘಟನೆ ರಾಜೌರಿ ಪಟ್ಟಣದಲ್ಲಿ ಇಂದು ಮುಂಜಾನೆ ಸಂಭವಿಸಿದೆ. ಅಲ್ಲದೆ ಇಬ್ಬರು ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.

news-banner
ರಾಜೌರಿ ಹೆಚ್ಚುವರಿ ಜಿಲ್ಲಾಧಿಕಾರಿ ರಾಜ್ ಕುಮಾರ್ ಥಾಪ್ಪಾ ಪಾಕ್ ಶೆಲ್ ದಾಳಿಗೆ ಮೃತಪಟ್ಟ ಹಿರಿಯ ನಾಗರಿಕ ಸೇವಕ.

“ರಾಜೌರಿಯಿಂದ ವಿನಾಶಕಾರಿ ಸುದ್ದಿ. ನಾವು ಜಮ್ಮು ಮತ್ತು ಕಾಶ್ಮೀರ ಆಡಳಿತ ಸೇವೆಗಳ ಸಮರ್ಪಿತ ಅಧಿಕಾರಿಯನ್ನು ಕಳೆದುಕೊಂಡಿದ್ದೇವೆ. ನಿನ್ನೆಯಷ್ಟೇ ಅವರು ಜಿಲ್ಲೆಯಾದ್ಯಂತ ಉಪ ಮುಖ್ಯಮಂತ್ರಿಯೊಂದಿಗೆ ಇದ್ದರು ಮತ್ತು ನಾನು ಅಧ್ಯಕ್ಷತೆ ವಹಿಸಿದ್ದ ಆನ್‌ಲೈನ್‌ ಸಭೆಯಲ್ಲಿ ಭಾಗವಹಿಸಿದ್ದರು’ ಎಂದು ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ ಹೇಳಿದ್ದು, ಅವರ ಸಾವಿಗೆ ಸಂತಾಪ ಸೂಚಿಸಿದ್ದಾರೆ.

error: Content is protected !!