ಸುಳ್ಯ: ನಾಳೆ ಅಂದರೆ ಮೇ. 11 ರಂದು ಮದುವೆಯಾಗಬೇಕಿದ್ದ ಯುವಕ ಮೆಹಂದಿಯ ಮುನ್ನ ದಿನವೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಸೇವಾಜೆ ಎಂಬಲ್ಲಿ ನಡೆದಿದೆ. ಜರ್ನಾದನ ಆತ್ಮಹತ್ಯೆಗೆ ಯತ್ನಿಸಿದ ಯುವಕ.
ಜನಾರ್ದನನ ಮದುವೆಯ ಎಲ್ಲಾ ಸಿದ್ಧತೆಗಳು ನಡೆದಿತ್ತು. ಇಂದು ರಾತ್ರಿ ಮೆಹೆಂದಿ ಆಚರಣೆಗೆ ಸಿದ್ಧತೆಯಾಗಿತ್ತು. ಆದರೆ ನಿನ್ನೆ ಬೆಳಗಿನ 10 ಗಂಟೆಯ ವೇಳೆಗೆ ಜನಾರ್ದನ್ ವಿಷ ಸೇವಿಸಿ ಅಸ್ವಸ್ಥಗೊಂಡಿರುವುದು ಮನೆಯವರಿಗೆ ಗೊತ್ತಾಗಿದೆ. ತಕ್ಷಣ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದು ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದೊಯ್ಯಲಾಯಿತು. ಇದೀಗ ಜನಾರ್ದನರವರು ಚೇತರಿಸಿಕೊಂಡಿರುವುದಾಗಿ ತಿಳಿದು ಬಂದಿದೆ.
ಆತ್ಮಹತ್ಯೆ ಯತ್ನಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.