ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಕ್ಷಣಾ ಸಿಬ್ಬಂದಿಯೊಂದಿಗೆ ಶನಿವಾರ ಮತ್ತೊಂದು ಉನ್ನತ ಮಟ್ಟದ ಸಭೆ ನಡೆ ಭಾರತದ ಭದ್ರತಾ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ. ಪಾಕಿಸ್ತಾನದೊಂದಿಗೆ ಸೇನಾ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆ ಈ ಸಭೆ ಭಾರೀ ಮಹತ್ವ ಪಡೆದಿದೆ. ಈ ವೇಳೆ ಪಾಕಿಸ್ತಾನ ದಾಳಿ ಮುಂದುವರಿಸಿದರೆ ಆಪರೇಷನ್ ಸಿಂಧೂರ ಮುಂದುವರಿಸುವ ಬಗ್ಗೆ ಚರ್ಚೆಗಳು ನಡೆದಿದೆ.
ಭಾರತದಲ್ಲಿ ಭವಿಷ್ಯದಲ್ಲಿ ನಡೆಯುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ “ಯುದ್ಧ ಕೃತ್ಯ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ. ಈ ನಿರ್ಧಾರದೊಂದಿಗೆ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಯೋತ್ಪಾದಕ ಘಟನೆಗಳ ವಿರುದ್ಧ ಕೆಂಪು ಗೆರೆ (ರೆಡ್ ಲೈನ್)ಗಳನ್ನು ಎಳೆಯಲು ಪ್ರಯತ್ನಿಸುತ್ತಿದೆ ಮತ್ತು ಅಪರಾಧಿಗಳು ಮತ್ತು ಪಿತೂರಿಗಾರರಿಗೆ ದೃಢವಾಗಿ ಪ್ರತಿಕ್ರಿಯಿಸುವ ಉದ್ದೇಶವನ್ನು ಸ್ಪಷ್ಟಪಡಿಸುತ್ತದೆ, ಇದು ಭಾರತೀಯರನ್ನು ಗುರಿಯಾಗಿಸಿಕೊಂಡು ವಿವಿಧ ಭಯೋತ್ಪಾದಕ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಪಾಕಿಸ್ತಾನಕ್ಕೆ ಸಂದೇಶವೆಂದು ಪರಿಗಣಿಸಲಾಗಿದೆ.
ಭದ್ರತಾ ಸನ್ನಿವೇಶವನ್ನು ಪರಿಶೀಲಿಸಲು ಮತ್ತು ಭವಿಷ್ಯದ ಕ್ರಮಕ್ಕಾಗಿ ಕಾರ್ಯತಂತ್ರಗಳನ್ನು ರೂಪಿಸಲು ರಕ್ಷಣಾ ಸಚಿವ ರಾಜನಾಥ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಡೊಬಾಲ್, ಮೂರೂ ಪಡೆಗಳು ಮುಖ್ಯಸ್ಥರ, ಸೇನಾ ಪಡೆಗಳ ಮುಖ್ಯಸ್ಥ ಅನಿಲ್ ಚೌಹಾಣ್ ಅವರೊಂದಿಗೆ ಮೋದಿ ಚರ್ಚೆ ನಡೆಸಿದ್ದಾರೆ.