ಕಾರ್ಕಳ: ಕಾಮಿಡಿ ಕಿಲಾಡಿಗಳು ಮೂಲಕ ಫೇಮಸ್ ಆಗಿರುವ ಮಲ್ಪೆ ಹೂಡೆಯ ನಿವಾಸಿ ರಾಕೇಶ್ ಪೂಜಾರಿ(33) ರವಿವಾರ ರಾತ್ರಿ ಮಿಯ್ಯಾರಿನ ಸ್ನೇಹಿತನ ಮನೆಯಲ್ಲಿ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ವೇಳೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ರಾಕೇಶ್ ಅವರು 2014ರಲ್ಲಿ ಖಾಸಗಿ ಚಾನೆಲ್ ನಲ್ಲಿ ‘ಕಡ್ಲೆ ಬಜಿಲ್’ ಎಂಬ ತುಳು ರಿಯಾಲಿಟಿ ಶೋ ಮೂಲಕ ಅನೇಕ ಜನರ ಮನ ಗೆದ್ದಿದ್ದರು. 2018 ರಲ್ಲಿ ಜೀ ಕನ್ನಡ ‘ಕಾಮಿಡಿ ಕಿಲಾಡಿಗಳು ಸೀಸನ್ 2’ ಶೋಗೆ ಸೆಲೆಕ್ಟ್ ಆಗಿದ್ದರು. ಇದರಲ್ಲಿ ರನ್ನರ್ ಅಪ್ ತಂಡದ ಸದಸ್ಯರಾಗಿದ್ದರು. ಬಳಿಕ 2020ರಲ್ಲಿ ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿಜೇತರಾಗಿದ್ದರು.
ತುಳುವಿನ ಅನೇಕ ಸಿನಿಮಾಗಳಿಗೆ ಬಣ್ಣ ಹಚ್ಚಿದ್ದ ಅವರು ಪ್ರತಿಭಾನ್ವಿತ ನಟರಾಗಿದ್ದರು.