ಚಿತ್ರದುರ್ಗ: ಕಾರು ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕು ಹಳೆಹಳ್ಳಿ ಬಳಿ ಇಂದು ಬೆಳಗ್ಗೆ ನಡೆದಿದೆ. ಆಂಧ್ರಪ್ರದೇಶ ಗುಂಟೂರಿನ ವೆಂಕಟಪುರಂ ಮೂಲದ ಸುನೀತಾ(34), ಶ್ಯಾಂ ಬಾಬು (19) ಹಾಗೂ ಶಿವ ನಾಗಲು (60) ಮೃತಪಟ್ಟವರು.
ಇವರು ಆಂಧ್ರದಿಂದ ಶಿವಮೊಗ್ಗಕ್ಕೆ ತೆರಳುವ ವೇಳೆ ಅಪಘಾತ ಸಂಭವಿಸಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿದ್ದ ಕಾರಿಗೆ ಹೊಳಲ್ಕೆರೆಯಿಂದ ಚಿತ್ರದುರ್ಗ ಕಡೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ.