ನವದೆಹಲಿ: ಭಾರತದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕ (ಡಿಜಿಎಂಒ) ಲೆಫ್ಟಿನೆಂಟ್ ಜನರಲ್ ರಾಜೀವ್ ಘಾಯ್ ಮತ್ತು ಪಾಕಿಸ್ತಾನದ ಡಿಜಿಎಂಒ ಮೇಜರ್ ಜನರಲ್ ಕಾಶಿಫ್ ಚೌಧರಿ ಇಂದು ಸಂಜೆ 5 ಗಂಟೆಗೆ ಮಾತುಕತೆ ನಡೆಸಲಿದ್ದಾರೆ.
ಗಡಿಯುದ್ದಕ್ಕೂ ಡ್ರೋನ್ ದಾಳಿ ಮತ್ತು ಕ್ಷಿಪಣಿ ದಾಳಿಯಿಂದ ನಾಲ್ಕು ದಿನಗಳ ಕಾಲ ಉದ್ವಿಗ್ನತೆ ಉಂಟಾದ ನಂತರ, ಭೂಮಿ, ವಾಯು ಮತ್ತು ಸಮುದ್ರದ ಮೂಲಕ ಎಲ್ಲಾ ಮಿಲಿಟರಿ ಕಾರ್ಯಾಚರಣೆಗಳನ್ನು ನಿಲ್ಲಿಸಲು ಅವರು ಮೇ 10 ರ ಸಂಜೆ ಮಾಡಿಕೊಂಡ ಒಪ್ಪಂದದ ಕುರಿತು ಚರ್ಚಿಸಲಿದ್ದಾರೆ. ಎರಡೂ ದೇಶಗಳ ಡಿಜಿಎಂಒಗಳು ಭಾರತ-ಪಾಕಿಸ್ತಾನ ಉದ್ವಿಗ್ನತೆಯ ಬಗ್ಗೆ ಇದೀಗ ಎರಡನೇ ಬಾರಿ ಚರ್ಚಿಸುತ್ತಿದ್ದಾರೆ.
ಪಾಕಿಸ್ತಾನ ಗಡಿ ಪರಿಸ್ಥಿತಿ ಮತ್ತು ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿರುವ ಬಗ್ಗೆ ಗಂಭೀರ ಚರ್ಚೆ ನಡೆಯಲಿದೆ.
ಪ್ರಮುಖ ಚರ್ಚಾ ಅಂಶಗಳು
ಪಾಕಿಸ್ತಾನದಿಂದ ವರದಿಯಾದ ಕದನ ವಿರಾಮ ಉಲ್ಲಂಘನೆಗಳ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸುವ ಸಾಧ್ಯತೆಯಿದೆ. ಗಡಿಯಲ್ಲಿ ಮತ್ತಷ್ಟು ಸಮಸ್ಯೆಗಳು ಉಲ್ಬಣವಾಗದಂತೆ ತಡೆಯಬೇಕು ಎಂಬ ಒಪ್ಪಂದಕ್ಕೆ ಎರಡೂ ರಾಷ್ಟ್ರಗಳು ಬದ್ಧವಾಗಿರುವ ಹಾಗೂ ನಿಯಂತ್ರಣ ರೇಖೆ (ಎಲ್‌ಒಸಿ) ಮತ್ತು ಅಂತರರಾಷ್ಟ್ರೀಯ ಗಡಿಯಲ್ಲಿ ಶಾಂತಿಯನ್ನು ಕಾಪಾಡಿಕೊಳ್ಳಲು, ಈ ಪ್ರದೇಶಗಳಲ್ಲಿ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಎರಡೂ ಕಡೆಯವರು ಕ್ರಮಗಳನ್ನು ಚರ್ಚಿಸುವ ನಿರೀಕ್ಷೆಯಿದೆ.