ಉಡುಪಿ: ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಇಂದು ಬೆಳಿಗ್ಗೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಲೀನಾ ಮಥಾಯಸ್ ಅವರು ರಸ್ತೆ ಬದಿ ನಿಂತಿದ್ದಾಗ ಅವರಿಗೆ ಕಾರು ಢಿಕ್ಕಿ ಹೊಡೆದಿತ್ತು. ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ
ಲೀನಾ ಮಥಾಯಸ್ ಅವರು ಹಿರಿಯ ಕಾಂಗ್ರೆಸ್ ನಾಯಕಿಯಾಗಿದ್ದು, ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದರು. ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನ ಉಪಾಧ್ಯಕ್ಷೆ, ರಾಜ್ಯ ಮಹಿಳಾ ಕಾಂಗ್ರೆಸ್‌ನ ಮಾಜಿ ಕಾರ್ಯದರ್ಶಿ ಮತ್ತು ಶಿರ್ವ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯೆಯಾಗಿದ್ದರು.