ಉಡುಪಿ: ವಿದ್ಯುತ್ ತಂತಿ ಮೈ ಮೇಲೆ ಬಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಉದಯೋನ್ಮುಖ ಯಕ್ಷಗಾನ ಕಲಾವಿದ ಮೃತಪಟ್ಟ ಘಟನೆ ಚಿಕ್ಕಮಗಳೂರು ಆಗುಂಬೆ ಸಮೀಪದ ಕೊಪ್ಪ ಎಂಬಲ್ಲಿ ಸಂಭವಿಸಿದೆ. ಹಿಂಬದಿ ಸವಾರ ಪಾರಾಗಿದ್ದಾರೆ.
ರಂಜಿತ್ ಬನ್ನಾಡಿ ಪ್ರಾಣ ಕಳೆದುಕೊಂಡ ಯಕ್ಷಗಾನ ಕಲಾವಿದೆ.
ಇವರು ಕೊಪ್ಪ ಸಮೀಪದಲ್ಲಿದ್ದ ಸೂರಾಲು ಮೇಳದ ಪ್ರದರ್ಶನ ಮಳೆಯಿಂದ ರದ್ದಾದ ಕಾರಣ ಮನೆಗೆ ಸ್ಕೂಟರ್‌ನಲ್ಲಿ ವಾಪಸ್ ಆಗುತ್ತಿದ್ದರು. ಈ ವೇಳೆ ಆಗುಂಬೆ ಕೊಪ್ಪ ಸಮೀಪ ವಿದ್ಯುತ್ ತಂತಿ ಮೈ ಮೇಲೆ ಬಿದ್ದು ದ್ವಿಚಕ್ರ ವಾಹನ ಬಿಡುತ್ತಿದ್ದ ರಂಜಿತ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಕಾರದಿಂದ ಹಿಂಬದಿ ಸವಾರ ಸ್ರೀ ಪಾತ್ರಧಾರಿ ವಿನೋದ್ ರಾಜ್ ಎನ್ನುವವರು ಪಾರಾಗಿದ್ದಾರೆ.
ಘಟನೆ ನಡೆದ ಕೂಡಲೇ ಸ್ಥಳೀಯರ ಸಹಕಾರದಿಂದ ತುರ್ತುವಾಹನದ ಮೂಲಕ ಮಣಿಪಾಲ ಖಾಸಗಿ ಅಸ್ಪತ್ರೆ ಕರೆತರಲಾಯಿತಾದರೂ ಅದಾಗಲೇ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದು ಬಂದಿದೆ. ಕೊಪ್ಪ ಪೊಲಿಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.