ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎಗೆ ವಹಿಸಲು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾದಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದ ಘಟನೆ ಇಂದು ಮಂಗಳೂರಿನಲ್ಲಿ ನಡೆದಿದೆ.
ಮಂಗಳೂರು ಉತ್ತರದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಯೆಯ್ಯಾಡಿ ಜಮಾಯಿಸಿ ಮಂಗಳೂರು ಏರ್ಪೋರ್ಟ್‌ನಿಂದ ಉರ್ವಾ ಮಾರ್ಕೆಟ್ ಕಡೆಗೆ ಸಾಗುತ್ತಿದ್ದ ಸಿದ್ದರಾಮಯ್ಯ ವಾಹನ ಕಪ್ಪು ಬಾವುಟ ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು. ಆಗ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.
ನೂತನ ಡಿಸಿ ಕಚೇರಿ ಉದ್ಘಾಟನೆ ಹಾಗೂ ಉಳ್ಳಾಲ ದರ್ಗಾ ಉರುಸ್ ನಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಮಂಗಳೂರಿಗೆ ಬಂದಿದ್ದು, ಈ ವೇಳೆ ಈ ಘಟನೆ ನಡೆದಿದೆ. ಈ ವೇಳೆ ಕಾರ್ಯಕರ್ತರು ಸಿದ್ದರಾಮಯ್ಯಗೆ ಧಿಕ್ಕಾರ ಕೂಗಿದರು.
ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಆಶ್ರಿತ್ ನೋಂಡಾ, ಮಂಗಳೂರು ಉತ್ತರ ಯುವಮೋರ್ಚಾ ಅಧ್ಯಕ್ಷ ಭರತ್ ರಾಜ್ ಕೃಷ್ಣಾಪುರ ಮತ್ತಿತರರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಅವರನ್ನು ವಶಕ್ಕೆ ಪಡೆಯಲಾಗಿದೆ.