ಐತಿಹಾಸಿಕ ಉಳ್ಳಾಲ ದರ್ಗಾಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ!


ಮಂಗಳೂರು: ಪಡೀಲ್ ನಲ್ಲಿ ನಿರ್ಮಾಣವಾಗಿರುವ ದಕ್ಷಿಣ ಕನ್ನಡ ಜಿಲ್ಲಾ ನೂತನ ಜಿಲ್ಲಾಧಿಕಾರಿ ಕಚೇರಿಯನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಜೆ ಊರೂಸ್ ಸಂಭ್ರಮದಲ್ಲಿರುವ ಐತಿಹಾಸಿಕ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.
ಈ ವೇಳೆ ವಿಧಾನಸಭಾ ಸ್ಪೀಕರ್ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಮತ್ತಿತರರು ಉಪಸ್ಥಿತರಿದ್ದರು.

error: Content is protected !!