ಮಂಗಳೂರು: ದುಷ್ಕರ್ಮಿಗಳ ತಂಡ ಯುವಕನಿಗೆ ಚೂರಿಯಿಂದ ಇರಿದ ಘಟನೆ ಪಾಣೆಮಂಗಳೂರಿನಲ್ಲಿ ತಡರಾತ್ರಿ ನಡೆದಿದೆ. ಇರಿತಕ್ಕೊಳಗಾದ ವ್ಯಕ್ತಿಯನ್ನು ಹಮೀದ್ ಯಾನೆ ಅಮ್ಮಿ ಎಂದು ಹೆಸರಿಸಲಾಗಿದೆ.
ಹಮೀದ್ ರಸ್ತೆಯಲ್ಲಿ ನಿಂತಿದ್ದ ವೇಳೆ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎನ್ನಲಾಗಿದೆ. ವೈಯಕ್ತಿಕ ದ್ವೇಷದಿಂದ ಕೃತ್ಯ ನಡೆದಿರುವ ಸಾಧ್ಯತೆಯಿದ್ದು ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಹಮೀದ್ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.