ಜೂನ್ 1ರಿಂದ ನವೆಂಬರ್ 1ರವರೆಗೆ ಬೆಂಗಳೂರು-ಮಂಗಳೂರು ನಡುವಿನ 6 ರೈಲುಗಳು ರದ್ದು

ಮಂಗಳೂರು: ಜೂನ್ 1ರಿಂದ ನವೆಂಬರ್ 1ರವರೆಗೆ ನಡೆಯಲಿರುವ ರೈಲ್ವೆ ವಿದ್ಯುದ್ದೀಕರಣ ಮತ್ತು ಸುರಕ್ಷತಾ ಕಾಮಗಾರಿಯಿಂದಾಗಿ ಬೆಂಗಳೂರು-ಮಂಗಳೂರು, ಬೆಂಗಳೂರು-ಕಾರವಾರ ನಡುವೆ ಸಂಚಾರ ನಡೆಸುತ್ತಿದ್ದ 6 ರೈಲುಗಳು ಮುಂದಿನ 6 ತಿಂಗಳು ಸಂಪೂರ್ಣ ರದ್ದಾಗುತ್ತಿವೆ ಎಂದು ನೈರುತ್ಯ ರೈಲ್ವೆ ಇಲಾಖೆ ಮಾಹಿತಿ ನೀಡಿದೆ.


ಮೇ 31ರಿಂದ ನವೆಂಬರ್ 1ರವರೆಗೆ ಪ್ರತಿ ಶನಿವಾರದಂದು ಸಂಚರಿಸುವ ಯಶವಂತಪುರ ಟು ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2 ರವರೆಗೆ ಪ್ರತಿ ಭಾನುವಾರದಂದು ಸಂಚರಿಸುವ ಮಂಗಳೂರು ಜಂಕ್ಷನ್ ಟು ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.
ಜೂನ್ 1 ರಿಂದ ಅಕ್ಟೋಬರ್ 30 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16575) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16576) ರದ್ದು.
ಜೂನ್ 2 ರಿಂದ ಅಕ್ಟೋಬರ್ 31 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16515) ರದ್ದು.
ಜೂನ್ 3 ರಿಂದ ನವೆಂಬರ್ 1 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 16516) ರೈಲು ರದ್ದುಗೊಳ್ಳಲಿದೆ ಎಂದು ಪ್ರಕಟಣೆ ತಿಳಿಸಿದೆ.

error: Content is protected !!