ಮತ್ತೆ ಕೊರೊನಾ ಅಬ್ಬರ: ಭಾರತದಲ್ಲಿ ಆತಂಕ, ಮಕ್ಕಳ ಬಗ್ಗೆ ಎಚ್ಚರಿಕೆ ವಹಿಸಲು ಸೂಚನೆ

ನವದೆಹಲಿ: ಆಗ್ನೇಯ ಏಷ್ಯಾದ ಕೆಲವು ಭಾಗಗಳಲ್ಲಿ COVID-19 ಪ್ರಕರಣಗಳು ಒಂದೇ ಸಮನೆ ಏರಿಕೆಯಾಗುತ್ತಿದೆ. ಹಾಂಗ್ ಕಾಂಗ್ ಮತ್ತು ಸಿಂಗಾಪುರ,, ಚೀನಾ, ಥೈಲ್ಯಾಂಡ್ ಕೊರೊನಾ ಅಬ್ಬರ ಜೋರಾಗಿದೆ. ಸಿಂಗಾಪುರದಲ್ಲಿ ಕೋವಿಡ್ ಏರಿಕೆ ಪ್ರಮಾಣ ಶೇ.28ರತ್ತ ತಲುಪಿದ್ದು, ಅಪಾಯದ ಮಟ್ಟವನ್ನು ಮೀರುತ್ತಿದೆ. ಇಲ್ಲಿ ಮೇ ಮೊದಲ ವಾರದಲ್ಲಿಯೇ ಬರೋಬ್ಬರಿ 14,200 ಪ್ರಕರಣಗಳು ದಾಖಲಾಗಿವೆ. ತಜ್ಞರ ಪ್ರಕಾರ, ಈ ಉಲ್ಬಣವು ಏಷ್ಯಾದ ಹಲವಾರು ಪ್ರದೇಶಗಳಿಗೆ ಮಾರಕ ಹೊಡೆತ ನೀಡಲಿದೆ ಎಂದು ಅಂದಾಜಿಸಿದ್ದಾರೆ.

ವಿಶ್ವದ ಅತ್ಯಂತ ಜನನಿಬಿಡ ಪ್ರದೇಶಗಳಲ್ಲಿ ಒಂದಾದ ಆಗ್ನೇಯ ಏಷ್ಯಾದ ಕೆಲವು ಭಾಗಗಳಲ್ಲಿ COVID-19 ಹೊಸ‌ ಪ್ರಕರಣಗಳು ಕಾಣಿಸಿಕೊಂಡಿದೆ. ಆರೋಗ್ಯ ಅಧಿಕಾರಿಗಳ ಪ್ರಕಾರ, ಏಷ್ಯಾದಾದ್ಯಂತ ಕೊರೊನಾ ವೈರಸ್‌ನ ರೂಪಾಂತರ ಹೊಂದಿದೆ. ಬೀಸಿಗೆಯಲ್ಲಿ ಜಾಸ್ತಿಯಾಗುತ್ತಿದೆ. ಇದನ್ನು ಲಘುವಾಗಿ ತೆಗೆದುಕೊಳ್ಳದಂತೆ ಹಾಗೂ ಸಾಕಷ್ಟು ಮುನ್ನೆಚ್ಚರಿಕೆ ವಹಿಸವುಂತೆ ಎಚ್ಚರಿಕೆ ನೀಡಿದ್ದಾರೆ.

ಭಾರತದಲ್ಲಿ ಆತಂಕವಿದೆಯೇ?
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಧಿಕೃತ ಮಾಹಿತಿಗಳ ಪ್ರಕಾರ, ದೇಶದಲ್ಲಿ ಪ್ರಸ್ತುತ ಕೇವಲ 93 ಸಕ್ರಿಯ COVID-19 ಪ್ರಕರಣಗಳಿವೆ. ಇಲ್ಲಿಯವರೆಗೆ, ಭಾರತದಲ್ಲಿ ಯಾವುದೇ ಹೊಸ ಕೊರೊನಾವೈರಸ್ ಪ್ರಕರಣಗಳು ವರದಿಯಾಗಿಲ್ಲ. ಆದಾಗ್ಯೂ, ವೈರಸ್ ಹೆಚ್ಚಾಗಿ ಬೆಚ್ಚಗಿನ ವಾತಾವರಣದಲ್ಲಿ ಹರಡುವುದರಿಂದ, ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಮೂಲಕ ಜನರು ಸಾಕಷ್ಟು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವಂತೆ ತಜ್ಞರು ಹೇಳಿದ್ದಾರೆ.
ಮುಖ್ಯವಾಗಿ 60 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರು, ವೈದ್ಯಕೀಯವಾಗಿ ದುರ್ಬಲರಾಗಿರುವವರು ಅಥವಾ ಆರೈಕೆಯಲ್ಲಿರುವವರು ಶಾಲೆಗೆ ಹೋಗುವ ಮಕ್ಕಳು ಮತ್ತು ವೈದ್ಯಕೀಯವಾಗಿ ದುರ್ಬಲ ಜನರೊಂದಿಗೆ ವಾಸಿಸುವವರು ಎಚ್ಚರಿಕೆಯಲ್ಲಿರಬೇಕು. ಸಾಧ್ಯವಾದರೆ ಮತ್ತೊಂದು ಲಸಿಕೆ ಪಡೆಯಬಹುದು ಎಂದು ಸೂಚಿಸಿದ್ದಾರೆ.

ಸಾಮಾನ್ಯ ಜ್ವರದ ಲಕ್ಷಣಗಳನ್ನು ಹೊಂದಿರುವವರು ತಕ್ಷಣ ವೈದ್ಯರ ಸಲಹೆ ಪಡೆಯಬೇಕು. ವು ಕೆಮ್ಮುವಾಗ ಅಥವಾ ಸೀನುವಾಗ ಮೂಗು ಮತ್ತು ಬಾಯಿಯನ್ನು ಮುಚ್ಚಿಕೊಳ್ಳಬೇಕು. ಅಸ್ವಸ್ಥರಾದಾಗ ಸಾಮಾಜಿಕ ಅಂತರ ಕಾಪಾಡಬೇಕು ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡುವುದು ಸೇರಿದಂತೆ ಉತ್ತಮ ವೈಯಕ್ತಿಕ ನೈರ್ಮಲ್ಯವನ್ನು ಕಾಪಾಡಿಕೊಳ್ಳಬೇಕು, ಮೂಗು ಸೋರುವಿಕೆ, ಗಂಟಲು ನೋವು, ತಲೆನೋವು ಅಥವಾ ಜ್ವರದಂತಹ ಲಕ್ಷಣಗಳನ್ನು ಹೊಂದಿರುವವರು ಮಾಸ್ಕ್ ಧರಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ.

error: Content is protected !!