ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಾಘಾತಕ್ಕೆ ವರ ಮೃತ್ಯು!

 ಜಮಖಂಡಿ: ಇಲ್ಲಿನ ಕಲ್ಯಾಣಮಂಟಪವೊಂದರಲ್ಲಿ ನಡೆದ ಮದುವೆ ಸಮಾರಂಭದಲ್ಲಿ ವಧುವಿಗೆ ವರ ತಾಳಿ ಕಟ್ಟಿದ ಕೆಲವೇ ಹೊತ್ತಿನಲ್ಲಿ ಹೃದಯಾಘಾತದಿಂದ ಮೃತಪಟ್ಟ ಧಾರುಣ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಮೃತ ವರನನ್ನು ಕುಂಬಾರಹಳ್ಳ ಗ್ರಾಮದ ನಿವಾಸಿ ಪ್ರವೀಣ್‌ ಕುರಣಿ ಎಂದು ಹೆಸರಿಸಲಾಗಿದೆ.

ಇಂದು ಕಲ್ಯಾಣ ಮಂಟಪದಲ್ಲಿ ಪ್ರವೀಣ್ ಕುರಣಿ ಹಾಗೂ ಯುವತಿಯ ಮದುವೆ ಸಮಾರಂಭ ನಡೆಯುತ್ತಿದ್ದು ವೇದಿಕೆ ಮೇಲೆ ವಧು-ವರ ಪರಸ್ಪರ ಹಾರ ಬದಲಾಯಿಸಿದ್ದಾರೆ. ಬಂಧು-ಬಳಗದವರು ಶುಭ ಹಾರೈಸುವುದಕ್ಕೆ ಪ್ರಾರಂಭ ಆಗುತ್ತಿದ್ದಂತೆ ಹೃದಯಾಘಾತವಾಗಿ ವರ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಮದುವೆ ಮನೆಗಳಲ್ಲಿ ಸೂತಕ ಆವರಿಸಿದೆ.

error: Content is protected !!