ಮಂಗಳೂರು: ಧರ್ಮಸ್ಥಳ ಮೂಲದ ಏರೋಸ್ಪೇಸ್ ಎಂಜಿನಿಯರ್ ಪಂಜಾಬ್ ಕಾಲೇಜಿನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆಕೆ ಪ್ರೇಮ ವೈಫಲ್ಯದಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಧರ್ಮಸ್ಥಳದ ಬೊಳಿಯೂರು ನಿವಾಸಿ ಆಕಾಂಕ್ಷ ಎಸ್ ನಾಯರ್ 6 ತಿಂಗಳ ಹಿಂದೆ ದೆಹಲಿಯ ಸ್ಪೈಸ್ ಜೆಟ್ ಏರೋಸ್ಪೇಸ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದಳು. ಶೈಕ್ಷಣಿಕ ದಾಖಲೆಗಳನ್ನು ತರಲು ಶುಕ್ರವಾರ ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿಗೆ ತೆರಳಿದ್ದಳು. ಈ ವೇಳೆ ಕಾಲೇಜಿನ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದ ಘಟನೆ ಬೆಳಕಿಗೆ ಬಂದಿತ್ತು. ಆಕಾಂಕ್ಷ ಪೋಷಕರು ಕಾಲೇಜು ಆಡಳಿತವೇ ಕಾರಣ ಎಂದು ದೂರಿತ್ತು.
ಆದರೆ ತನಿಖೆ ನಡೆಸಿದ ಪೊಲೀಸರು ಸಾವಿನ ಹಿನ್ನೆಲೆ ಬಯಲು ಮಾಡಿದ್ದಾರೆ. ಆಕಾಂಕ್ಷ ತಾನು ಓದುತ್ತಿದ್ದ ಯೂನಿವರ್ಸಿಟಿಯ ಪ್ರೊಫೆಸರ್ ಕೇರಳದ ಕೊಟ್ಟಾಯಂ ನಿವಾಸಿ ಎರಡು ಮಕ್ಕಳ ತಂದೆ ಬಿಜಿಲ್ ಮ್ಯಾಥ್ಯೂ ಎಂಬಾತನನ್ನು ಪ್ರೀತಿಸುತ್ತಿದ್ದಳು. ಮ್ಯಾಥ್ಯೂ ಜೊತೆ ಆತನ ಮನೆಗೆ ಹೋಗಿ ಮದುವೆಯಾಗುವಂತೆ ಒತ್ತಾಯಿಸಿ ಆಕಾಂಕ್ಷ ಜಗಳ ಮಾಡಿದ್ದು ಕಾಲೇಜಿನಲ್ಲೂ ಜಗಳ ಮಾಡಿ ಕಟ್ಟಡದ ನಾಲ್ಕನೇ ಮಹಡಿಗೆ ಹೋಗಿ ಕೆಳಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.