ಕೆಎಸ್‌ಆರ್‌ಟಿಸಿ ಬಸ್‌ ಪಲ್ಟಿ: ಪಿಎಸ್‌ಐ ಸೇರಿ ಇಬ್ಬರು ಸಾವು

ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಮೋರಿಗೆ ಪಲ್ಟಿಯಾಗಿ‌, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಸೇರಿ‌ ಇಬ್ಬರು ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಬೆಂಗಳೂರು- ಕನಕಪುರ ರಸ್ತೆಯಲ್ಲಿ ಇಂದು ಬೆಳಗ್ಗೆ ಸಂಭವಿಸಿದೆ.

Ramanagara KSRTC Bus Overturns

ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಿಎಸ್‌ಐ ನಾಗರಾಜ್ ಹಾಗೂ ಮತ್ತೊಬ್ಬ ನಾಗರಿಕರು ಮೃತರು. ಗಾಯಾಳುಗಳ ಪೈಕಿ ಒಬ್ಬರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರನ್ನು ದಯಾನಂದ ಸಾಗರ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಬಸ್ಸು ಬೆಳಗ್ಗೆ ಕನಕಪುರದಿಂದ ಬೆಂಗಳೂರಿಗೆ ಹೋಗುತ್ತಿತ್ತು. ಕಗ್ಗಲೀಪುರ ಠಾಣೆ ಸಮೀಪ ನಿಯಂತ್ರಣ ಕಳೆದುಕೊಂಡ ಚಾಲಕ, ರಸ್ತೆ ವಿಭಜಕದ ಮೇಲೆ‌ ಹತ್ತಿಸಿದ್ದಾನೆ. ಪಕ್ಕದ ರಸ್ತೆಗೆ ನುಗ್ಗಿದ ಬಸ್, ಎದುರಿಗೆ ಬಂದ ನಾಗರಾಜ್ ಮತ್ತು ಮತ್ತೊಬ್ಬರು ಇದ್ದ ಬೈಕ್‌ಗೆ ಡಿಕ್ಕಿ ಹೊಡೆದು, ಪಕ್ಕದ ಹಳ್ಳಕ್ಕೆ ಬಿದ್ದಿದೆ. ಘಟನಾ ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!