ರಾಮನಗರ : ಬೆಂಗಳೂರು ಮೂಲದ ಮೂವರು ಯುವತಿಯರು ಜಲಾಶಯದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೈಜಿಗುಡ್ಡ ಡ್ಯಾಮ್ನಲ್ಲಿ ನಡೆದಿದೆ. ಜಲಾಶಯ ವೀಕ್ಷಣೆಗೆಂದು ಬೆಂಗಳೂರಿನಿಂದ ಒಟ್ಟು ಏಳು ಯುವತಿರು ತೆರಳಿದ್ದರು. ಈ ವೇಳೆ ಓರ್ವ ಯುವತಿ ನೀರಿಗೆ ಬಿದ್ದಿದ್ದು, ಒಬ್ಬಳ ರಕ್ಷಣೆಗೆಂದು ಇನ್ನುಳಿದ ಆರು ಯುವತಿಯರು ಸಹ ನೀರಿಗೆ ಇಳಿದಿದ್ದಾರೆ. ಆದ್ರೆ, ಮೂವರು ಮುಳುಗಿ ಸಾವನ್ನಪ್ಪಿದ್ದಾರೆ. ಉಳಿದವರನ್ನು ಯುವಕನೋರ್ವನು ರಕ್ಷಣೆ ಮಾಡಿದ್ದಾನೆ.ವೈಜಿ ಗುಡ್ಡ ಜಲಾಶಯದಲ್ಲಿ ಬೆಂಗಳೂರು ಮೂಲದ ರಾಘವಿ(18) ಮಧುಮಿತ(20), ಹಾಗೂ ರಮ್ಯಾ(22) ಎನ್ನುವವರು ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.
ಬೆಂಗಳೂರಿನಿಂದ ಸಂಬಂಧಿಕರ ಮನೆಗೆ ಬಂದಿದ್ದ ಯುವತಿಯರು, ವೈಜಿ ಗುಡ್ಡ ಜಲಾಶಯ ವೀಕ್ಷಣೆಗೆಂದು ಹೋಗಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಏಳು ಯುವತಿರು ನೀರಿಗೆ ಬಿದ್ದಾಗ ಸ್ಥಳದಲ್ಲಿದ್ದ ಯುವಕನೋರ್ವ ಕೆಲವರನ್ನು ರಕ್ಷಣೆ ಮಾಡಿದ್ದಾನೆ. ಆದ್ರೆ, ಏಳು ಜನರಲ್ಲಿ ಮೂವರು ಮೃತಪಟ್ಟಿದ್ದಾರೆ. ಸದ್ಯ ಮೃತ ದೇಹಗಳನ್ನು ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.