ರಾಜ್ಯದ 23 ಜಿಲ್ಲೆಗಳಲ್ಲಿ ಮೇ 22ರ ತನಕ ಭಾರೀ ಮಳೆ, ಬಿರುಗಾಳಿ: ಯೆಲ್ಲೋ ಅಲರ್ಟ್‌ ಘೋಷಣೆ

ಮಂಗಳೂರು: ರಾಜ್ಯದಲ್ಲಿ ಮೇ 22 ರ ಗುರುವಾರದವರೆಗೆ ಮಧ್ಯಮದಿಂದ ಭಾರೀ ಗುಡುಗು ಸಹಿತ ಭಾರೀ ಮಳೆಯಾಗಲಿದ್ದು, ಬಿರುಗಾಳಿ ಬೀಸುವ ಮುನ್ಸೂಚನೆಯನ್ನು
ಭಾರತ ಹವಾಮಾನ ಇಲಾಖೆ (IMD) ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಕರ್ನಾಟಕ 23 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಪ್ರಕಾರ, ಬಂಗಾಳಕೊಲ್ಲಿಯ ಆಗ್ನೇಯ ಮತ್ತು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪಕ್ಕದ ಭಾಗಗಳಲ್ಲಿ ಮೇಲ್ಮುಖ ಚಂಡಮಾರುತ ಬೀಸಲಾರಂಭವಾಗಿ ಹವಾಮಾನದಲ್ಲಿ ಪ್ರಕ್ಷುಬ್ದ ಸ್ಥಿತಿ ಉಂಟಾಗಿದೆ. ತೆಲಂಗಾಣದಿಂದ ಉತ್ತರ ತಮಿಳುನಾಡಿನವರೆಗಿನ ತಗ್ಗು ಪ್ರದೇಶವು ತೇವಾಂಶದಿಂದ ಕೂಡಿದ್ದು, ದಕ್ಷಿಣ ಭಾರತದಾದ್ಯಂತ ವ್ಯಾಪಕ ಮಳೆ ಉಂಟಾಗಲಿದೆ.

ಮುಂದಿನ ಕೆಲವು ದಿನಗಳಲ್ಲಿ ರಾಜ್ಯಾದ್ಯಂತ ಹೆಚ್ಚಿನ ಗುಡುಗು, ಮಿಂಚು ಮತ್ತು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು IMD ಮುನ್ಸೂಚನೆ ನೀಡಿದೆ.

ಬೆಂಗಳೂರು ನಗರ ಮತ್ತು ಗ್ರಾಮೀಣ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ಕೊಡಗು, ಬೆಳಗಾವಿ, ಬೀದರ್, ರಾಯಚೂರು, ಯಾದಗಿರಿ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಈ ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ, ಜೊತೆಗೆ ಗಂಟೆಗೆ 50–60 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಭಾನುವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ನೀರು ನಿಂತು ಸಂಚಾರಕ್ಕೆ ಅಡ್ಡಿಯಾಗಿದೆ. ನಗರದಲ್ಲಿ 24 ಗಂಟೆಗಳಲ್ಲಿ ಸುಮಾರು 40 ಮಿಮೀ ಮಳೆಯಾಗಿದೆ. ಸೋಮವಾರದಾದ್ಯಂತ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ, ಭಾಗಶಃ ಮೋಡ ಕವಿದ ವಾತಾವರಣ ಮತ್ತು ಆರ್ದ್ರತೆಯ ಮಟ್ಟವು ಸುಮಾರು 93 ಪ್ರತಿಶತದಷ್ಟು ಇರುತ್ತದೆ. ಹಗಲಿನ ತಾಪಮಾನವು 22°C ಮತ್ತು 27°C ನಡುವೆ ಇರುತ್ತದೆ ಎಂದು ನಿರೀಕ್ಷಿಸಲಾಗಿದೆ.

“ಮೇ 20 ರಿಂದ ಮೇ 22 ರವರೆಗೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. IMD ಇಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಿದ್ದು, ಗಂಟೆಗೆ 50-430 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು X ನಲ್ಲಿ ಬರೆದಿದೆ.

error: Content is protected !!