ರಾಮನಗರ: ಬಿಡದಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಹತ್ಯೆ ಮಾಡಲಾಗಿದೆ ಎಂಬ ಸುದ್ದಿ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಆದರೆ ಇದೀಗ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದ್ದು, ಬಾಲಕಿ ರೈಲು ಢೀಕ್ಕಿ ಹೊಡೆದು ಬಾಲಕಿ ಮೃತಪಟ್ಟಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಬಿಡದಿಯ ಹೋಬಳಿಯ ಭದ್ರಾಪುರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಖುಷಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಬಿಡದಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಪೊಲೀಸರು ಬಾಲಕಿಯ 32 ಬಗೆಯ ಸ್ಯಾಂಪಲ್ಸ್‌ಗಳನ್ನು ಎಫ್‌ಎಸ್‌ಎಲ್‌ಗೆ(Forensic Science Laboratory) ಕಳುಹಿಸಿದ್ದರು. ಬಳಿಕ ಎಫ್‌ಎಸ್‌ಎಲ್ ವರದಿಯಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ನಡೆದಿಲ್ಲ ಎಂಬುದು ದೃಢವಾಗಿತ್ತು.
ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆಯ ವರದಿ ಪೊಲೀಸರ ಕೈ ಸೇರಿದ್ದು, ಮರಣೋತ್ತರ ಪರೀಕ್ಷೆಯಲ್ಲಿ ತಲೆಗೆ ಏಟು ಬಿದ್ದಿರುವುದರಿಂದ ಬಾಲಕಿ ಸಾವನ್ನಪ್ಪಿರುವುದು ದೃಢವಾಗಿದೆ. ಇದಕ್ಕೆ ಪೂರಕ ಎನ್ನುವಂತೆ ಈಕೆಗೆ ರೈಲು ಡಿಕ್ಕಿಯಾಗಿರುವ ದೃಶ್ಯವು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.