ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು-ನಾಳೆ ಭಾರೀ ಮಳೆ! ರೆಡ್ ಅಲರ್ಟ್ ಎಚ್ಚರಿಕೆ!!


ಮಂಗಳೂರು: ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಅತೀ ಹೆಚ್ಚು ಮಳೆ ಅಂದರೆ ಗರಿಷ್ಠ 200 ಮಿಲಿ ಮೀಟರ್ ಗೂ ಹೆಚ್ಚು ಮಳೆ ಬರಲಿರುವ ಹಿನ್ನೆಲೆಯಲ್ಲಿ ಮೂರು ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ.
ಇನ್ನೂ ಮೇ 21ರವರೆಗೆ ಕರಾವಳಿ ಈ ಜಿಲ್ಲೆಗಳು ಸೇರಿದಂತೆ ಬೆಳಗಾವಿ, ಬಾಗಲಕೋಟ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆ ಆಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ನೀಡಿದೆ.

error: Content is protected !!