ಮಂಗಳೂರು: ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಪ್ರಮುಖ ಆರೋಪಿ ಮಸೀವುಲ್ಲಾ ಅತಿವುಲ್ಲಾ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈತ ಮೂಲತಃ ಮುಂಬಯಿ ನಿವಾಸಿ ಮುಂಬಯಿ ನಿವಾಸಿಯಾಗಿದ್ದು, ಯುವಕರಿಗೆ ವಿದೇಶದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 1,65,000 ರೂಪಾಯಿ ಹಣವನ್ನು ಪಡೆದಿದ್ದ. ಹೆಚ್ಚಿನ ತನಿಖೆಯ ವೇಳೆ ಆರೋಪಿಗಳು ಇದೇ ರೀತಿ ಹಲವಾರು ಯುವಕರನ್ನು ವಂಚಿಸಿದ್ದು, ಈವರೆಗೆ ಸುಮಾರು 1 ಕೋಟಿ 82 ಲಕ್ಷ ರೂಪಾಯಿವರೆಗೆ ಹಣವನ್ನು ಪಡೆದು ನಂಬಿಕೆ ದ್ರೋಹ ಎಸಗಿರುವುದಾಗಿ ಮಂಗಳೂರು ನಗರ ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಆರೋಪಿಯ ವಿರುದ್ದ ಈಗಾಗಲೇ ಅನಧಿಕೃತ ಕಂಪೆನಿ ತೆರೆದು ವಿದೇಶದಲ್ಲಿ ಉದ್ಯೋಗ ಕೊಡಿಸುವ ಬಗ್ಗೆ ಇಮಿಗ್ರೇಷನ್ ಅಧಿಕಾರಿಗಳಿಂದ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ 2024 ನೇ ಡಿಸೆಂಬರ್ ನಲ್ಲಿ ಪ್ರಕರಣ ದಾಖಲಾಗಿತ್ತು. ಎರಡೂ ಪ್ರಕರಣಗಳು ಮಂಗಳೂರು ಪೂರ್ವ ಪೊಲೀಸ್ ಠಾಣೆಯಿಂದ ಮುಂದಿನ ತನಿಖೆಯ ಬಗ್ಗೆ ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿದೆ.