‘ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ’- ಡಿಸಿಎಂ ಡಿ.ಕೆ.ಶಿ

ವಿಜಯನಗರ: ಗೃಹಲಕ್ಷ್ಮಿ ಯೋಜನೆಯ ಹಣವನ್ನು ಪ್ರತಿ ತಿಂಗಳು ಕೊಡುತ್ತೇವೆ ಅಂತ ಹೇಳಿಲ್ಲ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ವಿಜಯನಗರದಲ್ಲಿ ಕಾಂಗ್ರೆಸ್‌ ಸಾಧನಾ ಸಮಾವೇಶದ ಬಗ್ಗೆ ಮಾತನಾಡಿದ ಅವರು, ಗೃಹಲಕ್ಷ್ಮೀ ಯೋಜನೆಯ ಹಣ ಬಿಡುಗಡೆ ವಿಳಂಬದ ಕುರಿತಾಗಿ ಮಾಧ್ಯಮದವರು ಪ್ರಶ್ನಿಸಿದಾಗ ನೋಡ್ರಿ ನಾವು ತಿಂಗಳು ತಿಂಗಳು ಹಣ ಕೊಡ್ತೀವಿ ಅಂತ ಹೇಳಿಲ್ಲ ಎಂದು ಹೇಳಿಕೆ ನೀಡಿದ್ದಾರೆ. ನೀವು ಟ್ಯಾಕ್ಸ್‌ ಕಟ್ಟುತ್ತಾ ಇರಬೇಕು,ನಾವು ದುಡ್ಡು ಕೊಡ್ತಾ ಇರಬೇಕು. ಗುತ್ತಿಗೆ ಕೆಲಸ ಮಾಡುವವರಿಗೆ ನಾಳೆಯೇ ಹಣ ಬರುತ್ತಾ? 2, 3, 5 ವರ್ಷ ಆಗುತ್ತೆ ಅಲ್ವಾ.. ಅದೇ ರೀತಿ ಇದು ಕೂಡ ಬಂದಾಗ ಬರುತ್ತೆ ಎಂದು ಹೇಳಿದ್ದಾರೆ.

error: Content is protected !!