ಬಜ್ಪೆ: ಭಾರೀ ಮಳೆಯಿಂದಾಗಿ ಬಜ್ಪೆ ಸಮೀಪದ ಅದ್ಯಪಾಡಿಯ ಸಂಕೇಶ ಎಂಬಲ್ಲಿ ಮಳೆಗೆ ಭೂಕುಸಿತ ಉಂಟಾಗಿದ್ದು, ಮನೆಯೊಂದಕ್ಕೆ ಹಾನಿಯಾಗಿದೆ.
ಮಂಗಳೂರು ವಿಮಾನ ನಿಲ್ಡಾಣದ ಭಾಗದಿಂದ ಮಣ್ಣು ಮಿಶ್ರಿತ ನೀರು ರಭಸವಾಗಿ ಹರಿದು ಬರುತ್ತಿದೆ. ಇದರಿಂದ ಗುಡ್ಡದ ಕೆಳಭಾಗದ ಉಮಾನಾಥ ಸಾಲ್ಯಾನ್ ಎಂಬವರ ಮನೆಗೆ ಹಾನಿಯಾಗಿದ್ದು, ಮನೆಯ ಮುಂಭಾಗದ ಅಂಗಳದಲ್ಲಿ ಕೆಸರು ನೀರು ತುಂಬಿಕೊಂಡಿದೆ.
ಕಳೆದ ವರ್ಷವೂ ಇದೇ ಅನಾಹುತ ಸಂಭವಿಸಿತ್ತು. ಹೀಗಾಗಿ ಇದನ್ನು ಸರಿಪಡಿಸುವಂತೆ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಸ್ಥಳೀಯರು ಮನವಿ ಮಾಡಿದ್ದರು. ಆ ಸಂದರ್ಭದಲ್ಲಿ ಅಧಿಕಾರಿಗಳು ಸರಿಪಡಿಸುವ ಭರವಸೆ ನೀಡಿ, ಮರೆತುಬಿಟ್ಟಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ನಿರ್ಲಕ್ಷಕ್ಕೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ವಿಮಾನ ನಿಲ್ದಾಣ ಅಧಿಕಾರಿಗಳು ಹಾಗೂ ಮಂಗಳೂರು ತಾಲೂಕು ತಹಸಿಲ್ದಾರ್ ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.