ಶಾಸಕ ಪೂಂಜಾ ಭಾಷಣ: ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ

ಉಪ್ಪಿನಂಗಡಿ : ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ವೇದಿಕೆಯಲ್ಲಿ ಕೋಮು ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಹರೀಶ್ ಪೂಂಜಾ ವಿರುದ್ದ ಪ್ರಕರಣ ದಾಖಲಾಗಿದ್ದರಿಂದ ತನಿಖೆ ನಡೆಸಿದ್ದ ಪೊಲೀಸರು ಇಂದು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.


ಇದಕ್ಕಿಂತ ಮುಂಚೆ ಪೂಂಜಾ ಎಫ್ಐಆರ್ ರದ್ದುಗೊಳಿಸುವಂತೆ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ತಕ್ಷಣಕ್ಕೆ ಯಾವುದೇ ಕ್ರಮಕೈಗೊಳ್ಳದ ಹೈಕೋರ್ಟ್ ದೂರುದಾರರಿಗೆ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತ್ತು. ಈ ನಡುವೆ ಪೊಲೀಸರು ಶಾಸಕ ಪೂಂಜಾ ವಿರುದ್ದ ಹೈಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ನ್ಯಾಯಾಯದ ತೀರ್ಪಿನತ್ತ ಎಲ್ಲರ ಗಮನ ಹರಿದಿದೆ.

error: Content is protected !!