ವಿಜಯಪುರ: ಓವರ್ ಸ್ಪೀಡ್ ನಿಂದಾಗಿ ಡಿವೈಡರ್ ಹಾರಿದ ಸ್ಕಾರ್ಪಿಯೋ ಹೆದ್ದಾರಿಯ ಇನ್ನೊಂದು ಬದಿಯಲ್ಲಿ ಸಂಚರಿಸುತ್ತಿದ್ದ ವಿಆರ್ ಎಲ್ ಖಾಸಗಿ ಬಸ್ ಮತ್ತು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟ ಘಟನೆ ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ,
ಮೃತರನ್ನು ಸ್ಕಾರ್ಪಿಯೋ ವಾಹನದಲ್ಲಿದ್ದ ತೆಲಂಗಾಣ ಗಡವಾಲದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಟಿ.ಭಾಸ್ಕರನ್ ಹಾಗೂ ಅವರ ಪತ್ನಿ ಪವಿತ್ರಾ, ಪುತ್ರಿ ಜೋಸ್ನ್ಯಾ, ಪುತ್ರ ಅಭಿರಾಮ, ಸ್ಕಾರ್ಪಿಯೋ ಚಾಲಕ ವಿಜಯಪುರ ಜಿಲ್ಲೆಯ ಹೊರ್ತಿಯ ವಿಕಾಸ ಶಿವಪ್ಪ ಮಕನಿ ಹಾಗೂ ಖಾಸಗಿ ಬಸ್ ಚಾಲಕ ಬಸವರಾಜ ರಾಠೋಡ್ ಎಂದು ಗುರುತಿಸಲಾಗಿದೆ. ಭಾಸ್ಕರನ್ ಪುತ್ರ ಇನ್ನೋರ್ವ ಪ್ರವೀಣ್ ತೇಜ(10) ಹಾಗೂ ಲಾರಿ ಚಾಲಕ ಹುಲಜಂತಿಯ ಚನ್ನಬಸು ಸಿದ್ದಪ್ಪ ಮಾಳಿ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸೋಲಾಪುರದತ್ತ ತೆರಳುತ್ತಿದ್ದ ಸ್ಕಾರ್ಪಿಯೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಡಿವೈಡರ್ ಹಾರಿ ಮುಂಬೈನಿಂದ ಬಳ್ಳಾರಿಗೆ ತೆರಳುತ್ತಿದ್ದ ಖಾಸಗಿ ಬಸ್ ಮತ್ತು ಲಾರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.